ಮಂಗಳವಾರ, ಅಕ್ಟೋಬರ್ 27, 2020
23 °C

ವಿಜಯಪುರ: ಹಳ್ಳದಲ್ಲಿ ಕೊಚ್ಚಿ ಹೋದ ರೈತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಜಿಲ್ಲೆಯ ದೇವರಹಿಪ್ಪರಗಿ ತಾಲ್ಲೂಕಿನ ಮುಳಸಾವಳಗಿಯಲ್ಲಿ ಹಳ್ಳ ದಾಟಿ ಹೊಲಕ್ಕೆ ಹೊರಟಿದ್ದ ರೈತ ಶಿವಪುತ್ರ ಹಣಮಂತ ನಾಟೀಕಾರ(38) ನೀರಿನ ಸೆಳವಿಗೆ ಸಿಲುಕು ಕೊಚ್ಚಿಕೊಂಡು ಹೋಗಿದ್ದು, ಸುಮಾರು ಅರ್ಧ ಕಿ.ಮೀ.ದೂರದಲ್ಲಿ ದೇಹ ಪತ್ತೆಯಾಗಿದೆ.

ಜಿಲ್ಲೆಯಲ್ಲಿ ಮಳೆಗೆ 811 ಮನೆಗಳು ಭಾಗಶಃ ಕುಸಿದಿವೆ, ಐದು ಜಾನುವಾರುಗಳು ಸಾವಿಗೀಡಾಗಿವೆ. ದೂಳಖೇಡ, ಶಿರನಾಳ ಗ್ರಾಮದಲ್ಲಿ ಪ್ರವಾಹಕ್ಕೆ ಸಿಲುಕಿರುವ 15 ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ದೇವರ ಹಿಪ್ಪರಗಿ ತಾಲ್ಲೂಕಿನ ಚಿಕ್ಕರೂಗಿ ಗ್ರಾಮದಲ್ಲಿ ಹಳ್ಳದ ನೀರು ಗ್ರಾಮದ 10 ಮನೆಗಳಿಗೆ ನುಗ್ಗಿರುವುದರಿಂದ, ಜನರನ್ನು ಶಾಲೆಗೆ ಸ್ಥಳಾಂತರಿಸಲಾಗಿದೆ.

ಜಿಲ್ಲೆಯಲ್ಲಿ ಗುರುವಾರ ಮಳೆ ತಗ್ಗಿದೆ. ಆದರೂ ಸಹ ತಾಳಿಕೋಟೆ–ಹಡಗಿನಾಳ ನೆಲಟಮಟ್ಟದ ಸೇತುವೆ ಡೋಣಿ ಪ್ರವಾಹದಲ್ಲಿ ಮುಳುಗಿದೆ. ಎರಡು ದಿನಗಳಿಂದ ಮುಳುಗಿದ್ದ ದೇವರಹಿಪ್ಪರಗಿ–ಬಸವನ ಬಾಗೇವಾಡಿ ಸಂಪರ್ಕಿಸುವ ಸಾತಿಹಾಳ ಸೇತುವೆ ಇಂದು ಸಂಚಾರಕ್ಕೆ ಮುಕ್ತವಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು