ಗುರುವಾರ , ಡಿಸೆಂಬರ್ 3, 2020
18 °C
ಬೆಳೆಹಾನಿ: ಸಿಂದಗಿಯಲ್ಲಿ ರೈತ ಸಂಘದ ಪ್ರತಿಭಟನೆ

ಅತಿವೃಷ್ಟಿಯಿಂದ ಬೆಳೆನಷ್ಟ: ಕನಿಷ್ಠ 50 ಸಾವಿರ ಪರಿಹಾರಕ್ಕೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಿಂದಗಿ: ಅತಿವೃಷ್ಟಿಯಿಂದಾಗಿ ಬೆಳೆಹಾನಿಯಾಗಿರುವ ವಿಜಯಪುರ ಜಿಲ್ಲೆಯ ಎಲ್ಲ ರೈತರಿಗೂ ತಲಾ ಕನಿಷ್ಠ ₹ 50 ಸಾವಿರ ಪರಿಹಾರ ತಕ್ಷಣವೇ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ನೇತೃತ್ವದಲ್ಲಿ ರೈತರು ಮಂಗಳವಾರ ಪಟ್ಟಣದ ಮಿನಿವಿಧಾನಸೌಧ ಎದುರು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ರೈತ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಗೌಡ ಪಾಟೀಲ, ಸಿದ್ದು ಯಾಳಗಿ, ಶಿವನಗೌಡ ಬಿರಾದಾರ ಮಾತನಾಡಿ, ಸಂಕಷ್ಟದಲ್ಲಿರುವ ರಾಜ್ಯದ ಎಲ್ಲ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. 2018-19ನೇ ಸಾಲಿನ ಲಿಂಬೆ ಪುನ:ಶ್ಚೇತನ ಫಲಾನುಭವಿಗಳಿಗೆ ಘೋಷಣೆಯಾದ ಪರಿಹಾರದಲ್ಲಿ ಬಾಕಿ ಉಳಿದಿರುವ ₹ 2 ಕೋಟಿಯನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.

ಸಕ್ಕರೆ ಕಾರ್ಖಾನೆಗಳನ್ನು ಪ್ರಾರಂಭಗೊಳಿಸುವ ಪೂರ್ವದಲ್ಲಿಯೇ ರೈತರ ಕಬ್ಬು ಬೆಳೆಗೆ ದರ ನಿಗದಿಪಡಿಸಬೇಕು. ರೈತರ ಹಿಂದಿನ ಸಾಲವನ್ನು ಮನ್ನಾ ಮಾಡಿ ಮತ್ತೆ ಹೊಸ ಸಾಲ ನೀಡಬೇಕು. ಸಕ್ಕರೆ ಕಾರ್ಖಾನೆಗಳು ರೈತರ ಕಬ್ಬಿನ ಹಣ ಪಾವತಿಯನ್ನು ಆರು ತಿಂಗಳಾದರೂ ಪಾವತಿಸುವುದಿಲ್ಲ. ಹೀಗಾಗಿ ಈ ಹಣವನ್ನು 15 ದಿನಗಳೊಳಗಾಗಿ ರೈತರಿಗೆ ಪಾವತಿಸಬೇಕು ಎಂಬ ಬೇಡಿಕೆಯನ್ನೊಳಗೊಂಡ ಮನವಿ ಪತ್ರವನ್ನು ತಹಶೀಲ್ದಾರ್ ಸಂಜೀವಕುಮಾರ ದಾಸರ ಅವರಿಗೆ ರೈತ ಸಂಘದ
ಪ್ರಮುಖರು ಸಲ್ಲಿಸಿದರು.

ಜೆ.ಎಲ್.ಶಾಬಾದಿ, ಮಂಜು ದೇವರಮನಿ, ಬಸವರಾಜ ಹಳ್ಳಿ, ಜಟ್ಟೆಪ್ಪ ಹೊಸಮನಿ, ಈರಣ್ಣ ಭಜಂತ್ರಿ, ಸಂಗಣ್ಣ ಇಂಚಗೇರಿ ಪ್ರತಿಭಟನೆ ನೇತೃತ್ವ ವಹಿಸಿದ್ದರು. ವಿವಿಧ ಗ್ರಾಮಗಳ ರೈತರು ಭಾಗವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು