ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10 ದಿನ ಪೂರೈಸಿದ ರೈತರ ಧರಣಿ

Last Updated 8 ಡಿಸೆಂಬರ್ 2022, 13:18 IST
ಅಕ್ಷರ ಗಾತ್ರ

ವಿಜಯಪುರ: ರೈತರು ಬೆಳೆದ ಕಬ್ಬಿಗೆ ಎಫ್‌ಆರ್‌ಪಿ ದರ ಹೆಚ್ಚಿಸಲು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಡೆಸುತ್ತಿರುವ ಅಹೋರಾತ್ರಿ ಧರಣಿ ಗುರುವಾರ 10 ದಿನ ಪೂರೈಸಿತು.

ತಾಳಿಕೋಟೆ ತಾಲ್ಲೂಕು ಘಟಕದ ಅಧ್ಯಕ್ಷ ಬಾಲಪ್ಪಗೌಡ ಲಿಂಗದಳ್ಳಿ ಮಾತನಾಡಿ, ಬಾಲಾಜಿ ಸಕ್ಕರೆ ಕಾರ್ಖಾನೆಯವರು ಉದ್ದೇಶ ಪೂರ್ವಕವಾಗಿ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ. ಎಫ್‌ಆರ್‌ಪಿ ದರ ಹೆಚ್ಚಿಸಲು ಮೊಂಡುತನ ಪ್ರದರ್ಶಿಸುತ್ತಾರೆ ಎಂದು ಆರೋಪಿಸಿದರು.

10 ದಿನಗಳಿಂದ ಧರಣಿ ನಡೆಸುತ್ತಿದ್ದರೂ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಹಾಗೂ ಮುಖ್ಯಸ್ಥರು ರೈತರ ತಾಳ್ಮೆಯನ್ನು ಪರೀಕ್ಷಿಸುತ್ತಿದ್ದಾರೆ. ಇದೇ ರೀತಿ ಮೊಂಡುತನ ಮುಂದುರೆಸಿದರೇ ಕಾರ್ಖಾನೆ ಆಡಳಿತ ಮಂಡಳಿ ಹಾಗೂ ಮುಖ್ಯಸ್ಥರಿಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ನಡೆಸುತ್ತಿರುವ ಧರಣಿಯನ್ನು ಸ್ಥಳಾಂತರಿಸಿ ಮತ್ತೆ ಸಕ್ಕರೆ ಕಾರ್ಖಾನೆಯಲ್ಲಿ ನಡೆಸಬೇಕಾಗುತ್ತದೆ. ಅದಕ್ಕೆ ಅವಕಾಶ ಕೊಡದೆ ಕಾರ್ಖಾನೆಯವರು ತಕ್ಷಣ ಎಫ್‌ಆರ್‌ಪಿ ದರ ಹೆಚ್ಚಿಸಿ ಘೋಷಣೆ ಮಾಡಿ ಹೋರಾಟವನ್ನು ಶಮನಗೊಳಿಸಬೇಕು ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಯಲ್ಲಾಲಿಂಗ ಹೂಗಾರ, ಶರಣಗೌಡ ಬಿರಾದಾರ, ಚನಬಸಪ್ಪ ಸಿಂಧೂರ, ದಾವಲಸಾಬ ನದಾಫ್‌, ಸಂಗನಗೌಡ ಬಿರಾದಾರ, ಗಿರಮಲ್ಲಪ್ಪ ದೊಡಮನಿ, ಬಸನಗೌಡ ಬಿರಾದಾರ, ನಾಗರಾಜ ಹಿರೂರ, ಬಸನಗೌಡ ಬಸರಕೋಡ, ಬಸನಗೌಡ ಜಾಲಿಕಟ್ಟಿ, ರಾಮನಗೌಡ ಬಾಲರಡ್ಡಿ, ಪ್ರಭು ಹೂಗಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT