ರೈತರ ಹೋರಾಟ ಬೆಂಬಲಿಸಿ ಪ್ರತಿಭಟನೆ

ವಿಜಯಪುರ: ಕೇಂದ್ರ ಸರ್ಕಾರ ಈಚೆಗೆ ಜಾರಿಗೆ ತಂದಿರುವ ಮೂರು ಕೃಷಿ ಸುಧಾರಣಾ ಕಾನೂನುಗಳನ್ನು ರದ್ದುಮಾಡುವಂತೆ ಪಂಜಾಬ್, ಹರಿಯಾಣ, ಉತ್ತರಪ್ರದೇಶ, ಉತ್ತರಾಖಂಡ, ಹಿಮಾಚಲಪ್ರದೇಶ ಮತ್ತು ರಾಜಸ್ಥಾನ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯಿಂದ ಆನ್‌ಲೈನ್ ಪ್ರತಿಭಟನೆ ನಡೆಸಲಾಯಿತು.
ಒಂದು ವಾರದಿಂದ ಪ್ರತಿಭಟನೆಗೆ ಸಂಬಂಧಿಸಿದ ವಿಚಾರ ಚರ್ಚೆಯಾಗುವುದಕ್ಕಿಂತ ಪ್ರತಿಭಟನೆಯನ್ನು ತಡೆಯಲು ಪೊಲೀಸರು ಕೈಗೊಂಡ ಕ್ರಮಗಳು ಹೆಚ್ಚು ಚರ್ಚೆಯಾಯಿತು. ರೈತರ ಹೋರಾಟವನ್ನು ತಡೆಯಲು ಮುಳ್ಳು ತಂತಿಗಳನ್ನು ಹಾಕಿದರು. ಆದರೂ ರೈತರು ದೆಹಲಿಗೆ ಸಾಲುಗಟ್ಟಲೆ ಹರಿದು ಬರುತ್ತಿದ್ದಾರೆ ಎಂದು ಲತಾ ತರಸೆ ಹೇಳಿದರು.
ರೈತರ ಮೇಲಿನ ಪೊಲೀಸರ ಅಮಾನುಷ ದೌರ್ಜನ್ಯವನ್ನು ಖಂಡಿಸಿ, ಕೇಂದ್ರ ಸರ್ಕಾರದ ಜನವಿರೋಧಿ, ರೈತ ವಿರೋಧಿ ನೀತಿಗಳನ್ನು ಧಿಕ್ಕರಿಸಿ ಘೋಷಣೆ ಕೂಗಲಾಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.