ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೌರವಧನ ಹೆಚ್ಚಿಸದಿದ್ದರೆ ಹೋರಾಟ: ಸುನೀಲಗೌಡ ಎಚ್ಚರಿಕೆ

Last Updated 16 ಸೆಪ್ಟೆಂಬರ್ 2022, 10:19 IST
ಅಕ್ಷರ ಗಾತ್ರ

ವಿಜಯಪುರ: ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಮಾಸಿಕ ಗೌರವ ಧನ ಹೆಚ್ಚಳ ಮತ್ತು ಜಲಜೀವನ ಮಿಷನ್ ಯೋಜನೆಗೆ ಗ್ರಾಮ ಪಂಚಾಯ್ತಿಯನ 15ನೇ ಹಣಕಾಸಿನ ಅನುದಾನ ಬಳಕೆಯ ಕುರಿತು ವಿಧಾನ ಪರಿಷತ್‌ ಸದಸ್ಯ ಸುನೀಲಗೌಡ ಪಾಟೀಲ ಮತ್ತೋಮ್ಮೆ ಸದನದಲ್ಲಿ ಧ್ವನಿ ಎತ್ತಿದರು.

ಗ್ರಾ. ಪಂ. ಜನಪ್ರತಿನಿಧಿಗಳ ಮಾಸಿಕ ಗೌರವ ಧನ ಹೆಚ್ಚಳ ವಿಚಾರದ ಕುರಿತು ಸುನೀಲಗೌಡ ಪಾಟೀಲ ಅವರು ವಿಧಾನ ಪರಿಷತ್ತಿನಲ್ಲಿ ಕೇಳಿರುವ ಪ್ರಶ್ನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲಿಖಿತ ಉತ್ತರ ನೀಡಿದ್ದು, ಆ ಉತ್ತರ ಗ್ರಾ. ಪಂ. ಜನಪ್ರತಿನಿಧಿಗಳ ಪಾಲಿಗೆ ನಿರಾಸೆ ಮೂಡಿಸಿದೆ. ಮಾಸಿಕ ಗೌರವಧನ ಹೆಚ್ಚಳ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಈ ಗೌರವಧನ ಪರಿಷ್ಕರಣೆ ಮಾಡಲು ನಿರ್ಧಿಷ್ಠ ಕಾಲಮಿತಿಯನ್ನು ನಿಗದಿ ಪಡಿಸಿಲ್ಲ ಎಂದು ತಿಳಿಸಿದ್ದಾರೆ.

ಮಾಸಿಕ ಗೌರವಧನ ಹೆಚ್ಚಸಿಲುಸರ್ಕಾರಕ್ಕೆ ಅನುದಾನದ ಕೊರತೆ ಇದೆಯಾ? ಎಂಬ ಪ್ರಶ್ನೆಗೂ ಸ್ಪಷ್ಟ ಉತ್ತರ ನೀಡಿಲ್ಲ ಎಂದು ಹೇಳಿದ್ದಾರೆ.

ಗ್ರಾ. ಪಂ. ಸದಸ್ಯರ ಮಾಸಿಕ ಗೌರವಧನ ಹೆಚ್ಚುಸುವಂತೆ ಸದನದ ಒಳಗೆ ಮತ್ತು ಹೊರಗೆ ಮಾಸಿಕ ಗೌರವಧನ ಹೆಚ್ಚಳ ಕುರಿತು ಸತತ ಹೋರಾಟ ಮಾಡುತ್ತಾ ಬಂದಿದ್ದೇನೆ. ಸಚಿವರು, ಸಿಎಂ ಸೇರಿದಂತೆ ಎಲ್ಲರಿಗೂ ಮನವಿ ಮಾಡಿದ್ದೇನೆ. ಅಲ್ಲದೇ, ಈ ಹೋರಾಟಕ್ಕೆ ವಿಧಾನ ಪರಿಷತ್‌ ಸದಸ್ಯರು ಪಕ್ಷಾತೀತವಾಗಿ ಬೆಂಬಲವನ್ನೂ ನೀಡಿದ್ದಾರೆ. ಕೂಡಲೇ ಸರ್ಕಾರ ಗ್ರಾ. ಪಂ. ಸದಸ್ಯರ ಮಾಸಿಕ ಗೌರವಧನ ಹೆಚ್ಚಳದ ಬಗ್ಗೆ ನಿರ್ಧಾರ ಕೈಗೊಳ್ಳದಿದ್ದರೆ ಹೋರಾಟವನ್ನು ತೀವ್ರಗೊಳಿಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

ಜೆಜೆಎಂ:

ಜಲಜೀವನ ಮಿಷನ್ ಯೋಜನೆಗೆ ಗ್ರಾ. ಪಂ. ವಂತಿಗೆಯನ್ನು 15ನೇ ಹಣಕಾಸು ಅನುದಾನದಲ್ಲಿ ಬಳಸಿಕೊಳ್ಳುತ್ತಿರುವ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರ ನೀಡಿರುವ ಮುಖ್ಯಮಂತ್ರಿಗಳು, 15ನೇ ಹಣಕಾಸು ಆಯೋಗದ ನಿರ್ಬಂಧಿತ ಅನುದಾನದಡಿ ಕುಡಿಯುವ ನೀರಿಗಾಗಿ ಕಾಯ್ದಿರಿಸಿರುವ ಶೇ 50ರಷ್ಟು ಹಣವನ್ನು ಜಲಜೀವನ ಮಿಷನ್ ಕಾಮಗಾರಿಗಳಿಗೆ ಉಪಯೋಗಿಸಲಾಗುತ್ತಿರುವುದರಿಂದ ಇತರೆ ಕಾಮಗಾರಿಗಳಿಗೆ ತೊಂದರೆ ಉಂಟಾಗಿಲ್ಲ. ಇತರ ಅಭಿವೃದ್ಧಿ ಕಾಮಗಾರಿಗಳನ್ನು 15ನೇ ಹಣಕಾಸು ಆಯೋಗದ ಅನಿರ್ಬಂಧಿತ ಅನುದಾನದಲ್ಲಿ ಕೈಗೊಳ್ಳಬಹುದಾಗಿದೆ. ಅಲ್ಲದೇ, ಆ. 8 ರಂದು ಜಲಜೀವನ ಮಿಷನ್ ಕಾಮಗಾರಿಗಳಿಗೆ 15ನೇ ಹಣಕಾಸಿನ ಅನುದಾನವನ್ನು ಗ್ರಾ. ಪಂ. ಗಳಿಂದ ಪಡೆಯದಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

***

ಕಳೆದ ವರ್ಷ ನಡೆದ ವಿಧಾನ ಪರಿಷತ್‌ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಸಚಿವರು ಮಾಸಿಕ ಗೌರವಧನ ಹೆಚ್ಚಳದ ಬಗ್ಗೆ ಆಶ್ವಾಸನೆ ನೀಡಿದ್ದರು. ಆದರೆ, ಈಗ ಈ ವಿಷಯದಲ್ಲಿ ಸರ್ಕಾರ ಮೀನಾಮೇಷ ಎಣಿಸುತ್ತಿದೆ

–ಸುನೀಲಗೌಡ ಪಾಟೀಲ, ವಿಧಾನ ಪರಿಷತ್‌ ಸದಸ್ಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT