ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ | ಬೆಂಕಿ ಅವಘಡ; ಕುಟುಂಬಸ್ಥರಿಗೆ ಸಹಾಯ ಧನ

Published 29 ಮಾರ್ಚ್ 2024, 14:39 IST
Last Updated 29 ಮಾರ್ಚ್ 2024, 14:39 IST
ಅಕ್ಷರ ಗಾತ್ರ

ವಿಜಯಪುರ: ಆಕಸ್ಮಿಕವಾಗಿ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅವಘಡ ಸಂಭವಿಸಿದ ರಾಜಾಜಿನಗರದ ಮಹಾದೇವ ದಿಂಡವಾರ ಅವರ ಮನೆಗೆ, ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಶುಕ್ರವಾರ ಭೇಟಿ ನೀಡಿ ಸಾಂತ್ವನ ಹೇಳಿ, ವೈಯಕ್ತಿಕವಾಗಿ ₹50 ಸಾವಿರ ಸಹಾಯಧನ ನೀಡಿದರು.

ಮಾರ್ಚ್‌ 19 ರಂದು ನಡೆದ ದುರ್ಘಟನೆಯಲ್ಲಿ ಬಾಲಕ ಮೃತಪಟ್ಟಿದ್ದು, ಮೂರು ಜನರು ಗಾಯಗೊಂಡಿದ್ದರು. ಈ ಹಿನ್ನೆಲೆ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಸಹಾಯಧನ ನೀಡಿದರು.

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ನಿರ್ದೇಶಕ ರಾಮನಗೌಡ ಪಾಟೀಲ ಯತ್ನಾಳ, ಬಿಜೆಪಿ ನಗರ ಮಂಡಲದ ಅಧ್ಯಕ್ಷ ಶಂಕರ ಹೂಗಾರ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT