ವಿಜಯಪುರ(ದೇವನಹಳ್ಳಿ): ಕೋರಮಂಗಲ ರಸ್ತೆ ಬಳಿಯ ನೀಲಗಿರಿ ತೋಪಿನಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡಿದೆ.
ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮಕ್ಕೆ ಸೇರಿದ ಅಂದಾಜು 50 ಎಕರೆ ತೋಪಿನಲ್ಲಿದ್ದ ಬಹುತೇಕ ನೀಲಗಿರಿ ಮರಗಳು ಸುಟ್ಟುಹೋಗಿವೆ.
ಬೆಂಕಿಯ ಕೆನ್ನಾಲೆಯಿಂದ ಸುತ್ತಮುತ್ತ ದಟ್ಟವಾಗಿ ಹೊಗೆ ಆವರಿಸಿಕೊಂಡಿದೆ.
ಬೆಂಕಿ ಕಾಣಿಸಿಕೊಂಡಿರುವುದಕ್ಕೆ ಕಾರಣ ತಿಳಿದು ಬಂದಿಲ್ಲ.
ಕೋರಮಂಗಲ ಅರಣ್ಯ ಪ್ರದೇಶದಲ್ಲಿ ಜಿಂಕೆ, ನವಿಲುಗಳು ಹೆಚ್ಚಿನ ಸಂಖ್ಯೆಯಲ್ಲಿವೆ.
ತೋಪಿಗೆ ಬೆಂಕಿ ಹೊತ್ತಿ ಉರಿಯುತ್ತಿದ್ದರೂ ಬೆಂಕಿ ನಂದಿಸಲು ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಬೇಗ ಸ್ಥಳಕ್ಕೆ ಬರಲಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.