ಶನಿವಾರ, ಅಕ್ಟೋಬರ್ 24, 2020
27 °C

ಹಿರಿಯರನ್ನು ಕಡೆಗಣಿಸದಿರಿ: ಮಹದೇವ್ ಸ್ವಾಮೀಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಅನುಭವದ ನಿಧಿಯಾಗಿರುವ ಹಿರಿಯರನ್ನು ಕಡೆಗಣಿಸುವುದರಿಂದ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಬಸವ ಕಲ್ಯಾಣಮಠದ ಅಧ್ಯಕ್ಷ ಮಹದೇವ್ ಸ್ವಾಮೀಜಿ ಹೇಳಿದರು.

ಇಲ್ಲಿನ ಚಂದೇನಹಳ್ಳಿ ಗೇಟ್ ನಲ್ಲಿರುವ ಬಸವ ಕಲ್ಯಾಣಮಠದಲ್ಲಿ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಬೆಂಗಳೂರು, ನೆಹರು ಯುವಕೇಂದ್ರ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬಸವ ಕಲ್ಯಾಣ ಮಠ ವಿಜಯಪುರ, ರಾಷ್ಟ್ರೀಯ ಯುವ ಯೋಜನೆ(ಎನ್.ವೈ.ಪಿ) ಕರ್ನಾಟಕ ವಲಯ, ಇವರ ಸಂಯುಕ್ತ ಆಶ್ರಯದಲ್ಲಿ ಅಂತರರಾಷ್ಟ್ರೀಯ ಹಿರಿಯ ನಾಗರಿಕರ ದಿನಾಚರಣೆ, ಫಿಟ್ ಇಂಡಿಯಾ, ಕೊರೊನಾ ವಾರಿಯರ್ಸ್‌ಗೆ ಅಭಿನಂದನೆ ಮತ್ತು ಚಿಂತನಗೋಷ್ಠಿಯಲ್ಲಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

‘ಹಿರಿಯ ನಾಗರಿಕರನ್ನು ಪ್ರೀತಿ ಹಾಗೂ ಗೌರವದಿಂದ ಕಾಣುವಂತಹ ಕೆಲಸವನ್ನು ಇಂದಿನ ಯುವ ಸಮೂಹ ಮಾಡಬೇಕು. ಅವರ ಬಗ್ಗೆ ಅಸಡ್ಡೆ, ಅಗೌರವದ ಭಾವನೆ ತೋರದೆ ಅವರ ಮಾರ್ಗದರ್ಶನ ಪಡೆದು ಉನ್ನತಿ ಸಾಧಿಸಬೇಕು. ’ ಎಂದು ಅಭಿಪ್ರಾಯಪಟ್ಟರು.

ಪುರಸಭಾ ಮುಖ್ಯಾಧಿಕಾರಿ ಎ.ಬಿ.ಪ್ರದೀಪ್ ಕುಮಾರ್ ಮಾತನಾಡಿ, ‘ದೇಶವನ್ನು ಉತ್ತಮ ಆರೋಗ್ಯದತ್ತ ಕೊಂಡೊಯ್ಯಲು ಫಿಟ್ ಇಂಡಿಯಾ ಅಭಿಯಾನ ಅಗತ್ಯ. ಜನರು ತಮ್ಮ ದೈನಂದಿನ ಬದುಕಿನಲ್ಲಿ ದೈಹಿಕ ಚಟುವಟಿಕೆ, ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದನ್ನು ಉತ್ತೇಜಿಸುವ ಗುರಿಯನ್ನು ಇಟ್ಟುಕೊಂಡಿರುವ ಕಾರ್ಯಕ್ರಮವಾಗಿದೆ. ಇದು ನಮ್ಮನ್ನು ಆರೋಗ್ಯಕರ ಜೀವನದತ್ತ ಕರೆದೊಯ್ಯಲಿದೆ. ತಂತ್ರಜ್ಞಾನದ ಬೆಳವಣಿಗೆ ನಮ್ಮನ್ನು ನಾವೇ ನಿಷ್ಕ್ರಿಯ ಮಾಡಿಕೊಳ್ಳುತ್ತಿದ್ದೇವೆ’ ಎಂದರು.

ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ವಾರಿಯರ್ಸ್ ಆಗಿ ಕೆಲಸ ಮಾಡಿದವರನ್ನು ಗಾಂಧಿ ಸ್ಮಾರಕದ ವತಿಯಿಂದ ಅಭಿನಂದಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು