ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ ಜಿಲ್ಲೆಯಲ್ಲಿ ಐದು ‘ನಮ್ಮ ಕ್ಲಿನಿಕ್‌’ ಕಾರ್ಯಾರಂಭ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವರ್ಚ್ಯುವಲ್ ಮೂಲಕ ಲೋಕಾರ್ಪಣೆ
Last Updated 14 ಡಿಸೆಂಬರ್ 2022, 12:46 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲೆಯಲ್ಲಿ ಸ್ಥಾಪಿಸಲಾದ ಐದು ‘ನಮ್ಮ ಕ್ಲಿನಿಕ್‌‘ಗಳನ್ನು ಬುಧವಾರ ವರ್ಚ್ಯುವಲ್ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದರು.

ಖಾಸಗಿ ಆಸ್ಪತ್ರೆಯಲ್ಲಿ ಸಿಗುವ ವೈದ್ಯಕೀಯ ಸೇವೆಯನ್ನು ಜನಸಾಮಾನ್ಯರಿಗೆ ಅತಿ ಕಡಿಮೆ ವೆಚ್ಚದಲ್ಲಿ ಒದಗಿಸುವ ನಿಟ್ಟಿನಲ್ಲಿ ಜನಸಾಮಾನ್ಯರಿಗೆ ಅನೂಕೂಲ ಕಲ್ಪಿಸಲು ರಾಜ್ಯ ಸರ್ಕಾರಮೊದಲ ಹಂತದಲ್ಲಿ 114 ನಮ್ಮ ಕ್ಲಿನಿಕ್‍ಗಳನ್ನು ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬಡತನ ಮತ್ತು ಅನಾರೋಗ್ಯ ಎರಡು ಅಭಿವೃದ್ದಿಯ ಶತ್ರುಗಳು, ಬಡತನದಿಂದ ಮಕ್ಕಳಲ್ಲಿ ಅಪೌಷ್ಠಿಕತೆ ಹೆಚ್ಚುತ್ತದೆ. ಯಾವುದೇ ತಾರತಮ್ಯವಿಲ್ಲದೇ ಎಲ್ಲರಿಗೂ ಉತ್ತಮ ಚಿಕಿತ್ಸೆ, ಉಚಿತ ಔಷಧೋಪಚಾರ ದೊರೆಯಲು ಕ್ರಮ ಕೈಗೊಳ್ಳಲಾಗಿದೆ. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ನಮ್ಮ ಸರ್ಕಾರ ಆದ್ಯತೆ ನೀಡಿದೆ ಎಂದರು.

ವಿಜಯಪುರ ನಗರದ ಪೇಟಿಬೌಡಿಯಲ್ಲಿ ಸ್ಥಾಪಿಸಲಾದ ಸುಸಜ್ಜಿತ ನಮ್ಮ ಕ್ಲಿನಿಕ್‍ನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ವಿಜಯಮಹಾಂತೇಶ, ಜಿಲ್ಲೆಗೆ 10 ನಮ್ಮ ಕ್ಲಿನಿಕ್‍ಗಳು ಮಂಜೂರಾಗಿದ್ದು, ಮೊದಲನೇ ಹಂತದಲ್ಲಿ ಜಿಲ್ಲೆಯ ಇಂಡಿ, ಸಿಂದಗಿ, ಮುದ್ದೇಬಿಹಾಳ, ಬಸವನಬಾಗೇವಾಡಿ ಹಾಗೂ ವಿಜಯಪುರ ನಗರದ ಪೇಟಿ ಬಾವಡಿಯಲ್ಲಿ ಸ್ಥಾಪಿಸಲಾದ ಐದು ನಮ್ಮ ಕ್ಲಿನಿಕ್‍ಗಳನ್ನು ಮುಖ್ಯಮಂತ್ರಿ ಲೋಕಾರ್ಪಣೆಗೊಳಿಸಿದ್ದಾರೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಸ್ಥಾಪಿಸಲಾದ ಈ ನಮ್ಮ ಕ್ಲಿನಿಕ್‍ಗಳಲ್ಲಿ ವೈದ್ಯಾಧಿಕಾರಿ, ಶುಶ್ರೂಷಣಾಧಿಕಾರಿ ಸೇರಿದಂತೆ ಅಗತ್ಯ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದು, ಗರ್ಭಿಣಿ ಆರೈಕೆ ಹಾಗೂ ಬಾಣಂತಿ ಸೇವೆಗಳು, ನವಜಾತ ಶಿಶು ಆರೈಕೆ ಹಾಗೂ ಚುಚ್ಚು ಮದ್ದು ಸೇವೆಗಳು, ಮಕ್ಕಳ ಹಾಗೂ ಹದಿಹರೆಯದವರಿಗೆ ನೀಡುವ ಆರೋಗ್ಯ ಸೇವೆಗಳು, ಹಿರಿಯ ನಾಗರಿಕರ ಆರೈಕೆ ಹಾಗೂ ಕಣ್ಣಿನ ಆರೋಗ್ಯ ಸೇವೆ, ದಂತ ಆರೋಗ್ಯ ಸೇವೆ, ತುರ್ತ ವೈದ್ಯಕೀಯ ಸೇವೆ, ಮಾನಸಿಕ ಆರೋಗ್ಯ ಸೇವೆಗಳು ಕಡಿಮೆ ವೆಚ್ಚದಲ್ಲಿ ಉತ್ತಮ ಗುಣಮಟ್ಟದ ವೈದ್ಯಕೀಯ ಸೇವೆ ದೊರೆಯಲಿವೆ ಎಂದು ಹೇಳಿದರು.

ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆ ಹೆಚ್ಚುವರಿ ನಿರ್ದೇಶಕ ಡಾ ಚನ್ನಮ್ಮ ಕಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುರೇಶ ಚವ್ಹಾಣ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎಸ್.ಎಲ್.ಲಕ್ಕಣ್ಣವರ, ಡಿವೈಎಸ್‍ಪಿ ಸಿದ್ದೇಶ್ವರ, ಡಾ.ಕೆ.ಡಿ.ಗುಂಡಬಾವಡಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಎಂ.ಕೋಲೂರ, ಸುರೇಶ ಹೊಸಮನಿ, ಮಹಾನಗರ ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT