ಶುಕ್ರವಾರ, ಸೆಪ್ಟೆಂಬರ್ 24, 2021
27 °C
ರಾಜ್ಯ ಸರ್ಕಾರಕ್ಕೆ ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್‌ ವರದಿ ಸಲ್ಲಿಕೆ

ವಿಜಯಪುರ ಅತಿವೃಷ್ಟಿ: ₹10.43 ಕೋಟಿ ಬೆಳೆ ಹಾನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಆಲಮಟ್ಟಿ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹೊರಬಿಟ್ಟ ಪರಿಣಾಮ ನಿಡಗುಂದಿ ಮತ್ತು ಮುದ್ದೇಬಿಹಾಳ ತಾಲ್ಲೂಕಿನ ಒಟ್ಟು 15 ಗ್ರಾಮಗಳ ಒಟ್ಟು 1,006 ಹೆಕ್ಟೇರ್‌ ಪ್ರದೇಶದ ಬೆಳೆಯು ಜಲಾವೃತವಾಗಿ, ಅಂದಾಜು ₹ 10.43 ಕೋಟಿ ಬೆಳೆಯು ಹಾನಿಗೀಡಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್‌ ತಿಳಿಸಿದ್ದಾರೆ.

ನಿಡಗುಂದಿ ತಾಲ್ಲೂಕಿನ ಅರಳದಿನ್ನಿ, ಯಲಗೂರ, ಕಾಶಿನಕುಂಟಿ, ಭೂದಿಹಾಳ ಪಿ.ಎನ್, ಮಸೂತಿ ಮತ್ತು ವಡವಡಗಿ ಮತ್ತು ಮುದ್ದೇಬಿಹಾಳ ತಾಲ್ಲೂಕಿನ ಕಮಲದಿನ್ನಿ, ಗಂಗೂರ, ದೇವೂರ, ನಾಗರಾಳ, ಕಾಳಗಿ, ಕುಂಚಗನೂರು, ತಂಗಡಗಿ ದೇವೂರು ಮತ್ತು ಹಂಡರಗಲ್ ಸೇರಿದಂತೆ ಒಟ್ಟು 15 ಗ್ರಾಮಗಳ ಕೃಷಿ ಜಮೀನು ಜಲಾವೃತವಾಗಿದ್ದವು ಎಂದು ಅವರು ಹೇಳಿದ್ದಾರೆ.

ಒಂದು ವಾರದ ಈಚೆಗೆ ಆಲಮಟ್ಟಿ ಜಲಾಶಯಕ್ಕೆ ನೀರಿನ ಒಳಹರಿವಿನ ಪ್ರಮಾಣ ಕಡಿಮೆ ಇರುವುದರಿಂದ ಪ್ರವಾಹ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾಗಿ ಒಟ್ಟು 85 ಮನೆಗಳಿಗೆ ಹಾನಿಗೆ ಒಳಗಾಗಿದ್ದು, ಅರ್ಹ ಎಲ್ಲ ಮನೆಗಳಿಗೆ ಎಸ್.ಡಿ.ಆರ್.ಎಫ್ ಮಾರ್ಗಸೂಚಿಯನುಸಾರ ಪರಿಹಾರ ಧನ ನೀಡಲಾಗಿ‌ದೆ. ಮಾನವ ಜೀವಹಾನಿಯ ಒಟ್ಟು 11 ಪ್ರಕರಣಗಳಲ್ಲಿ ತಲಾ ₹5 ಲಕ್ಷದಂತೆ ಪರಿಹಾರ ಧನವನ್ನು ನೀಡಲಾಗಿದೆ ಎಂದು ತಿಳಿಸಿದರು.

ಜಾನುವಾರು ಜೀವಹಾನಿಯ ಒಟ್ಟು 37 ಪ್ರಕರಣಗಳಲ್ಲಿ ಎಸ್.ಡಿ.ಆರ್.ಎಫ್ ಮಾರ್ಗಸೂಚಿಯನುಸಾರ ₹ 7.92 ಲಕ್ಷ ಪರಿಹಾರ ಧನವನ್ನು ನೀಡಲಾಗಿದೆ ಎಂದು ಹೇಳಿದರು.

ಅತಿವೃಷ್ಟಿಯಿಂದಾಗಿ ಮೂಲಭೂತ ಸೌಕರ್ಯಗಳ ಪ್ರವಾಹ ಹಾನಿಯ ಮಾಹಿತಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

***

ಬೆಳೆ ಹಾನಿಯಾದ ರೈತರಿಗೆ ಪರಿಹಾರ ತಂತ್ರಾಂಶದಲ್ಲಿ ಬೆಳೆ ಹಾನಿಯ ಮಾಹಿತಿಯನ್ನು ನಮೂದಿಸಿ, ಪರಿಹಾರ ಧನವನ್ನು ವಿತರಿಸಲಾಗುವುದು

ಪಿ.ಸುನೀಲ್‌ಕುಮಾರ್‌, ಜಿಲ್ಲಾಧಿಕಾರಿ

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು