ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೀಮಾ, ಕೃಷ್ಣಾ ಹರಿವು ಹೆಚ್ಚಳ: ಪ್ರವಾಹದ ಆತಂಕ

Last Updated 12 ಆಗಸ್ಟ್ 2022, 12:59 IST
ಅಕ್ಷರ ಗಾತ್ರ

ವಿಜಯಪುರ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ವಿಜಯಪುರ ಜಿಲ್ಲೆಯಲ್ಲಿ ಹರಿಯುತ್ತಿರುವ ಕೃಷ್ಣಾ ಮತ್ತು ಭೀಮಾ ನದಿಗಳ ವ್ಯಾಪ್ತಿಯಲ್ಲಿ ಪ್ರವಾಹ ಆತಂಕ ಎದುರಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಆಲಮಟ್ಟಿ ಜಲಾಶಯದಿಂದ 2.25 ಲಕ್ಷ ಕ್ಯೂಸೆಕ್‌ ನೀರನ್ನು ಕೃಷ್ಣಾ ನದಿಗೆ ಬಿಡಲಾಗುತ್ತಿದ್ದು, ನದಿ ಕೆಳ ಪಾತ್ರದ ಗ್ರಾಮಗಳಲ್ಲಿ ಪ್ರವಾಹ ಆತಂಕ ಎದುರಾಗಿದೆ.

ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಭೀಮಾ ನದಿಗೆ 30 ಸಾವಿರ ಕ್ಯೂಸೆಕ್‌ ನೀರನ್ನು ಬಿಟ್ಟಿದ್ದು, ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಹೀಗಾಗಿ ಚಡಚಣ, ಇಂಡಿ, ಆಲಮೇಲ ತಾಲ್ಲೂಕು ವ್ಯಾಪ್ತಿಯಲ್ಲಿ ನದಿ ದಂಡೆಯತ್ತ ಜನರು ತೆರಳದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ಡಂಗೂರ ಸಾರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT