ಬಸವನಬಾಗೇವಾಡಿ: ಭಾರತದ ಮೂಲ ಸಂಸ್ಕೃತಿಯಾಗಿರುವ ಜಾನಪದ ನಮ್ಮ ದೇಶದ ಶ್ರೇಷ್ಠ ಸಂಸ್ಕೃತಿಯಾಗಿದೆ. ಇಂತಹ ಜಾನಪದ ಇಂದು ಕಳೆಗುಂದುತ್ತಿದೆ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ, ಸಕ್ಕರೆ, ಜವಳಿ ಸಚಿವ ಶಿವಾನಂದ ಪಾಟೀಲ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕ, ಬಸವನಬಾಗೇವಾಡಿ, ನಿಡಗುಂದಿ, ಕೊಲ್ಹಾರ ತಾಲ್ಲೂಕು ಘಟಕ ಹಾಗೂ ಪಡಗಾನೂರಿನ ಮಾತೋಶ್ರೀ ಸುಗಲಾಬಾಯಿಗೌಡತಿ ಪಾಟೀಲ ಜಾನಪದ ಪ್ರತಿಷ್ಠಾನ ವತಿಯಿಂದ ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಜಾನಪದ ಪರಂಪರೆಯನ್ನು ಕಾಪಾಡಬೇಕಾದದ್ದು ನಮ್ಮೇಲ್ಲರ ಕರ್ತವ್ಯವಾಗಿದೆ ಎಂದರು.