ಇಂಡಿ: ತಾಲ್ಲೂಕಿನಾದ್ಯಂತ ರಾಷ್ಟ್ರೀಯ ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಯೋಜನೆ ಅಡಿಯಲ್ಲಿ 7ನೇ ಸುತ್ತಿನ ಕಾಲು ಬಾಯಿ ಬೇನೆ ಲಸಿಕೆ ಕಾರ್ಯಕ್ರಮವನ್ನು ಪಶುಪಾಲನೆ ಮತ್ತು ಪಶು ವೈದ್ಯಕೀಯ ಇಲಾಖೆಯಿಂದ ಶನಿವಾರ ಪ್ರಾರಂಭಿಸಲಾಯಿತು.

ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ ಶನಿವಾರ ಇಂಡಿ ಪಟ್ಟಣದಲ್ಲಿ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಹಿರಿಯ ಪಶು ವೈದ್ಯಾಧಿಕಾರಿ ಡಾ. ರಾಜಕುಮಾರ ಅಡಕಿ ಮಾತನಾಡಿ, ‘ತಾಲ್ಲೂಕಿನಲ್ಲಿ ಒಟ್ಟು 47,632 ಜಾನುವಾರುಗಳಿಗೆ ಲಸಿಕೆ ಹಾಕಲಾಗುವುದು. ಅದರಲ್ಲಿ 26,632 ದನಗಳಿಗೆ ಮತ್ತು 21 ಸಾವಿರ ಎಮ್ಮೆಗಳಿಗೆ ಲಸಿಕೆ ಹಾಕಲಾಗುವುದು’ ಎಂದರು.

‘ನಾಲ್ಕು ತಿಂಗಳ ಮೇಲ್ಪಟ್ಟ ದನ, ಎಮ್ಮೆ ಗಳಿಗೆ ಲಸಿಕೆ ಹಾಕಲಾಗುತ್ತದೆ. ಪ್ರಥಮ ಬಾರಿಗೆ ಲಸಿಕೆ ಪಡೆಯುವ ನಾಲ್ಕು ತಿಂಗಳ ಕರುಗಳಿಗೆ 21 ದಿನಗಳ ನಂತರ ಬೂಸ್ಟರ ಡೋಸ್ ಲಸಿಕೆ ಹಾಕಲಾಗುತ್ತದೆ’ ಎಂದರು.

‘ಈ ಲಸಿಕಾ ಕಾರ್ಯಕ್ರಮದಲ್ಲಿ 48 ಲಸಿಕೆದಾರರು, 8 ಮೇಲ್ವಿಚಾರಕರ ನೇತೃತ್ವದಲ್ಲಿ ತಾಲ್ಲೂಕಿನ ಎಲ್ಲ ಜಾನುವಾರುಗಳ ಮಾಲೀಕರ ಮನೆಗಳಿಗೆ ತೆರಳಿ ಜೂನ್ 9ರ ವರೆಗೆ ಲಸಿಕೆ ನೀಡಲಾಗುತ್ತದೆ. ಈ ಸುತ್ತಿನ ಲಸಿಕಾ ಕಾರ್ಯಕ್ರಮಕ್ಕೆ 51 ಸಾವಿರ ಡೋಸ್ ಲಸಿಕೆ ಸರಬರಾಜು ಆಗಿದೆ. ಪ್ರತಿ ಆರು ತಿಂಗಳಿಗೊಮ್ಮೆ ಲಸಿಕೆ ಹಾಕಲಾಗುತ್ತದೆ’ ಎಂದರು.

‘ಪ್ರತಿದಿನ ಲಸಿಕೆದಾರರು ಬೆಳಿಗ್ಗೆ 6 ಗಂಟೆಗೆ ನಿಗದಿಪಡಿಸಿದ ಗ್ರಾಮಗಳಿಗೆ ಭೇಟಿ ನೀಡಿ, ದನ, ಎಮ್ಮೆಗಳಿಗೆ ಲಸಿಕೆ ನೀಡುತ್ತಾರೆ. ಪ್ರತಿ ದಿನ ಇಬ್ಬರು ಲಸಿಕೆದಾರರು ಕೂಡಿ 80 ರಿಂದ 110 ಜಾನುವಾರುಗಳಿಗೆ ಲಸಿಕೆ ಹಾಕಲಾಗುವುದು ಎಂದರು.

ಇಲಾಖೆಯ ರಾಮಣ್ಣ ಉಪ್ಪಾರ, ರಮೇಶ ನರಳೆ, ಎಸ್.ಐ.ಮೂಡಲಗಿ, ಜಾವೇದ ಬಾಗವಾನ, ಎಸ್.ಎನ್.ಮೊಕಲಾಜಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.