ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿಜಯಪುರ | ಪ್ರವಾಸಿ ತಾಣಗಳ ಆಯ್ಕೆಗೆ: ಆನ್‍ಲೈನ್‌ ವೋಟ್‌ಗೆ ಮನವಿ

Published : 16 ಆಗಸ್ಟ್ 2024, 16:19 IST
Last Updated : 16 ಆಗಸ್ಟ್ 2024, 16:19 IST
ಫಾಲೋ ಮಾಡಿ
Comments

ವಿಜಯಪುರ: ಜಿಲ್ಲೆಯಲ್ಲಿರುವ ಪ್ರವಾಸಿ ತಾಣಗಳನ್ನು ಆಯ್ಕೆ ಮಾಡಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದ್ದು, ಜಿಲ್ಲೆಯ ಪ್ರವಾಸಿ ತಾಣಗಳನ್ನು ಆದ್ಯತಾ ಪ್ರವಾಸಿ ತಾಣಗಳನ್ನಾಗಿ ಆಯ್ಕೆಗೊಳ್ಳುವಂತೆ ಮಾಡಲು https://innovationindia.mygov.in/dekho-apna-desh/ಲಿಂಕ್ ಮೂಲಕ ಜಿಲ್ಲೆಯ ಪ್ರವಾಸಿಗರು, ಸಾರ್ವಜನಿಕರು ವೋಟ್ ಮಾಡುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಮನವಿ ಮಾಡಿಕೊಂಡಿದ್ದಾರೆ.

ಪ್ರವಾಸೋದ್ಯಮವನ್ನು ಮೇಲ್ದರ್ಜೆಗೇರಿಸಲು ಹಾಗೂ ಎಲ್ಲ ವರ್ಗಗಳಾದ ಧಾರ್ಮಿಕ, ಸಾಂಸ್ಕೃತಿಕ, ಪಾರಂಪರಿಕ, ನೈಸರ್ಗಿಕ ಹಾಗೂ ವನ್ಯಜೀವಿ ಮತ್ತು ಸಾಹಸ ಚಟುವಟಿಕೆಗಳು ಹಾಗೂ ಇತರೆ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ದೃಷ್ಟಿಕೋನದಲ್ಲಿ ಪ್ರಮುಖ ಪ್ರವಾಸಿ ತಾಣಗಳನ್ನು ಗುರುತಿಸಿ ಮೇಲ್ದರ್ಜೆಯಲ್ಲಿ ಅಭಿವೃದ್ದಿಪಡಿಸಲು ಕೇಂದ್ರ ಪ್ರವಾಸೋದ್ಯಮ ಸಚಿವಾಲಯದಿಂದ ದೇಖೋ ಅಪನಾ ದೇಶ People’s
Choice 2024 ಎಂಬ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದು, ವೋಟ್ ಮಾಡಲು ಸೆಪ್ಟೆಂಬರ್‌ 15 ಕೊನೆಯ ದಿನಾಂಕವಾಗಿದೆ. ಜಿಲ್ಲೆಯ ಪ್ರವಾಸಿ ತಾಣಗಳನ್ನು ವಿಶ್ವದರ್ಜೆಯಲ್ಲಿ ಸೇರ್ಪಡೆಗೊಳಿಸಲು ಪ್ರವಾಸಿಗರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಲಿಂಕ್‍ನ ಮೂಲಕ ವೋಟ್ ಮಾಡುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT