ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುದ್ದೇಬಿಹಾಳ | ರಸ್ತೆ ದಾಟುತ್ತಿದ್ದವರಿಗೆ ಬೈಕ್ ಡಿಕ್ಕಿ: ನಾಲ್ವರು ಸಾವು

Published 6 ಸೆಪ್ಟೆಂಬರ್ 2024, 3:59 IST
Last Updated 6 ಸೆಪ್ಟೆಂಬರ್ 2024, 3:59 IST
ಅಕ್ಷರ ಗಾತ್ರ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ) : ರಸ್ತೆಯನ್ನು ದಾಟುತ್ತಿದ್ದವರ ಮೇಲೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಕುಂಟೋಜಿ ಗ್ರಾಮದ ಹೊರ ವಲಯದ ಪಿಕೆಪಿಎಸ್ ಬಳಿ ಗುರುವಾರ ರಾತ್ರಿ 11.10 ಸುಮಾರಿಗೆ ನಡೆದಿದೆ.

ಮೃತಪಟ್ಟವರನ್ನು ದೇವರಹಿಪ್ಪರಗಿ ತಾಲ್ಲೂಕು ಹಂಚಲಿಯ ಅನೀಲ ಎಂ.ಖೈನೂರ(23), ತಾಳಿಕೋಟೆ ತಾಲ್ಲೂಕಿನ ಗೊಟಗುಣಕಿಯ ನಿಂಗರಾಜ ಚೌಡಕಿ(22) , ಮುದ್ದೇಬಿಹಾಳ ತಾಲ್ಲೂಕಿನ ಮಲಗಲದಿನ್ನಿಯ ಕುಮಾರ ಪ್ಯಾಟಿ(18) ಹಾಗೂ ಗಾಯಾಳು ಮಲಗಲದಿನ್ನಿಯ ರಾಯಪ್ಪ ಮಹಾಂತಪ್ಪ ಬಾಗೇವಾಡಿ(24)ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಮಲಗಲದಿನ್ನಿಯ ಶಾಹಿದ ಹುನಗುಂದ(19), ಪ್ರಶಾಂತ ಎಚ್. ಕುರುಬಗೌಡರ(16), ಹನಮಂತ ಕುರುಬಗೌಡರ(18) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಕುಂಟೋಜಿ ಜಾತ್ರೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೋಡಲು ಬಂದಿದ್ದವರು ರಸ್ತೆ ಬದಿ ವಾಹನ ನಿಲ್ಲಿಸಿ, ಮೂತ್ರವಿಸರ್ಜನೆಗೆ ರಸ್ತೆ ದಾಟುವ ಸಮಯದಲ್ಲಿ ಅತಿ ವೇಗದಿಂದ ಬಂದ ಬೈಕ್ ಸವಾರರು ಡಿಕ್ಕಿ ಹೊಡೆದಿದ್ದರಿಂದಲೇ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳುಗಳಿಗೆ ರಾತ್ರಿಯೇ ತಾಲ್ಲೂಕು ಆಸ್ಪತ್ರೆಯ ವೈದ್ಯ ಡಾ.ಪರಶುರಾಮ ವಡ್ಡರ ನೇತೃತ್ವದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದರು.

ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಶಂಕರ ಮಾರಿಹಾಳ, ಡಿವೈಎಸ್ಪಿ ಬಲ್ಲಪ್ಪ ನಂದಗಾವಿ,ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ,ಪಿಎಸೈ ಸಂಜಯ ತಿಪರೆಡ್ಡಿ ಭೇಟಿ ನೀಡಿದ್ದಾರೆ.ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT