ಶುಕ್ರವಾರ, ಸೆಪ್ಟೆಂಬರ್ 17, 2021
24 °C

ನಾಲ್ಕು ಕೆ.ಜಿ ಗಾಂಜಾ ವಶ; ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ತಿಕೋಟಾ ತಾಲ್ಲೂಕಿನ ರತ್ನಾಪೂರ ಕ್ರಾಸ್‌ನಲ್ಲಿ ಆರೋಪಿ ಅಮೋಘಸಿದ್ದ ಲೋಗಾಂವಿ ಎಂಬಾತ ಬೈಕ್‌ನಲ್ಲಿ ಸಾಗಿಸುತ್ತಿದ್ದ 4 ಕೆ.ಜಿ ಒಣಗಿದ ಗಾಂಜಾವನ್ನು ಅಬಕಾರಿ ಪೊಲೀಸರು ಪತ್ತೆಹಚ್ಚಿ, ಆರೋಪಿಯನ್ನು ವಶಕ್ಕೆ ಪಡೆದು‌, ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ.

ಅಬಕಾರಿ ಪಿ.ಎಸ್.ಐ ಪ್ರಕಾಶ ಜಾಧವ, ಅಬಕಾರಿ ಕಾನ್‌ಸ್ಟೆಬಲ್‌ಗಳಾದ  ಆಶ್ರೀತ್, ಈರಗೊಂಡ ಹಟ್ಟಿ, ಭೀಮಣ್ಣ ಕುಂಬಾರ ಹಾಗೂ ವಾಹನ ಚಾಲಕ ಪರಶುರಾಮ ತೆಲಗಿ ದಾಳಿಯಲ್ಲಿ ಪಾಲ್ಗೊಂಡಿದ್ದರು.

ವಿಜಯಪುರ ಜಿಲ್ಲಾ ಅಬಕಾರಿ ಉಪ ಆಯುಕ್ತರಾದ ಸಯೀದಾ ಅಜ್ಮತ್ ಆಪ್ರೀನ್, ಅಬಕಾರಿ ಉಪ-ಅಧೀಕ್ಷಕ ಎಚ್.ಎಸ್. ವಜ್ಜರಮಟ್ಟಿ, ಜಿಲ್ಲಾ ಅಬಕಾರಿ ವಿಚಕ್ಷಣ ದಳ ನಿರೀಕ್ಷಕ ಮಹಾದೇವ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.