ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಕೋವಿಡ್‍ನಿಂದ ಮತ್ತೆ ನಾಲ್ವರ ಸಾವು

Last Updated 29 ಆಗಸ್ಟ್ 2020, 12:54 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲೆಯಲ್ಲಿ ಕೋವಿಡ್‌ನಿಂದ ಮತ್ತೆ ನಾಲ್ವರು ಸಾವಿಗೀಡಾಗಿದ್ದಾರೆ. ಈ ಮೂಲಕ ಕೋವಿಡ್‌ನಿಂದ ಸಾವಿಗೀಡಾದವರ ಸಂಖ್ಯೆ 99ಕ್ಕೆ ಏರಿಕೆಯಾಗಿದೆ.

ಮುದ್ದೇಬಿಹಾಳ ಪಟ್ಟಣದ 57 ವರ್ಷ ವಯಸ್ಸಿನ ಒಬ್ಬರು ಹಾಗೂ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ 54 ಮತ್ತು 70 ವರ್ಷ ವಯಸ್ಸಿನ ಇಬ್ಬರು ಹಾಗೂ ಬೆಳಗಾವಿ ಜಿಲ್ಲೆಯ ರಾಯಬಾಗದ 57 ವರ್ಷ ವಯೋಮಾನದ ಒಬ್ಬರು ಸೇರಿದಂತೆ ಒಟ್ಟು ನಾಲ್ವರು ಕೋವಿಡ್‌ನಿಂದ ನಗರದ ವಿವಿಧ ಆಸ್ಪತ್ರೆಗಳಲ್ಲಿ ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್‌ ತಿಳಿಸಿದ್ದಾರೆ.

ತಾಲ್ಲೂಕುವಾರು ವಿವರ: ವಿಜಯಪುರ ತಾಲ್ಲೂಕಿನಲ್ಲಿ ಇದುವರೆಗೆ 3,440 ಜನರಿಗೆ ಕೋವಿಡ್‌ ಪಾಸಿಟಿವ್‌ ದೃಢಪಟ್ಟಿದೆ. ಬಸವನ ಬಾಗೇವಾಡಿ 609, ಬಬಲೇಶ್ವರ 65, ಚಡಚಣ 35, ದೇವರಹಿಪ್ಪರಗಿ 59, ಇಂಡಿ 579, ಕೊಲ್ಹಾರ 57, ಮುದ್ದೇಬಿಹಾಳ 628, ನಿಡಗುಂದಿ 35, ಸಿಂದಗಿ 543, ತಾಳಿಕೋಟೆ 198, ತಿಕೋಟಾ 76 ಮತ್ತು ಇತರೆ ಜಿಲ್ಲೆಯ 148 ಸೇರಿದಂತೆ ಇದುವರೆಗೆ 6,472 ಜನರಿಗೆ ಕೋವಿಡ್ ಪಾಸಿಟಿವ್‌ ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT