ಮಂಗಳವಾರ, ಜೂನ್ 28, 2022
26 °C

ಎಲ್ಲರಿಗೂ ಉಚಿತ ಕೋವಿಡ್ ಲಸಿಕೆ: ಕೂಚಬಾಳ ಸ್ವಾಗತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಜೂನ್ 21 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಪ್ರಕಟಿಸಿರುವ ಪ್ರಧಾನಿ  ನರೇಂದ್ರ ಮೋದಿ ಅವರ ಹೇಳಿಕೆಯನ್ನು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಸ್ವಾಗತಿಸಿದ್ದಾರೆ.

ನವೆಂಬರ್ ಒಳಗೆ ದೇಶದ 80 ಕೋಟಿ ಜನರಿಗೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಉಚಿತ ಪಡಿತರ ವಿತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರಧಾನಿಯವರ ಈ ನಿರ್ಧಾರಗಳು ಸಂಕಷ್ಟದಲ್ಲಿರುವ ಜನರಿಗೆ ವರದಾನವೆನಿಸಲಿವೆ. ಜನಪರ ಪ್ರಧಾನಿ ಎಂಬುದನ್ನು ಮೋದಿ ಅವರು ಈ ಮೂಲಕ ಸಾಬೀತುಪಡಿಸಿದ್ದಾರೆ. ಇದರಿಂದ ಪ್ರಧಾನಿಯವರ ಮೇಲೆ ಜನರ ವಿಶ್ವಾಸ ಇನ್ನಷ್ಟು ಹೆಚ್ಚಲಿದೆ ಎಂದು ಅವರು ಹೇಳಿದ್ದಾರೆ.

ಕೋವಿಡ್ ಲಸಿಕೆ ಉತ್ಪಾದನೆ ಮತ್ತಷ್ಟು ಹೆಚ್ಚಾಗಲಿದೆ. ದೇಶದಲ್ಲಿ 7 ಕಂಪನಿಗಳು ಲಸಿಕೆಯನ್ನು ಉತ್ಪಾದಿಸುತ್ತಿವೆ. ಇನ್ನೂ ಮೂರು ಕಂಪನಿಗಳು ಪ್ರಯೋಗದ ಹಂತದಲ್ಲಿವೆ. ಎರಡು ಲಸಿಕೆಗಳ ಪ್ರಯೋಗ ಬಹಳ ವೇಗವಾಗಿ ನಡೆಯುತ್ತಿದೆ.  ಭಾರತದ ಲಸಿಕಾ ಅಭಿಯಾನಕ್ಕೆ ಹೆಚ್ಚಿನ ವೇಗ ಸಿಗಲಿದೆ ಎಂಬುದು ಪ್ರಧಾನಿಯವರ ಕರ್ತವ್ಯಪರತೆಗೆ ಸಾಕ್ಷಿಯಂತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು