ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಶುಗಳಿಗೆ ಹೃದಯ ರಂದ್ರ ಉಚಿತ ಶಸ್ತ್ರಚಿಕಿತ್ಸೆ

ಬಿ.ಎಂ.ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ
Last Updated 10 ಏಪ್ರಿಲ್ 2023, 11:37 IST
ಅಕ್ಷರ ಗಾತ್ರ

ವಿಜಯಪುರ: ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ವೈದ್ಯರು, ಜನ್ಮದಿನಂದಲೇ ಹೃದ್ರೋಗ ಸಮಸ್ಯೆ ಎದುರಿಸುತ್ತಿದ್ದ ಇಬ್ಬರು ಮಕ್ಕಳಿಗೆ ಆಯುಷ್ಮಾನ್‌ ಭಾರತ- ಆರೋಗ್ಯ ಕರ್ನಾಟಕ ಸ್ಕೀಂ(ಎಬಿಆರ್‌ಕೆ) ನಡಿ ಉಚಿತವಾಗಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ.

ಬಿ.ಎಲ್.ಡಿ.ಇ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಗೆ ಭೇಟಿ ನೀಡುವ ಮುಂಬೈನ ಜುಪಿಟರ್ ಆಸ್ಪತ್ರೆಯ ಕಾರ್ಡಿಯಾಲಜಿಸ್ಟ್ ಡಾ. ಶ್ರೀನಿವಾಸ್ ಎಲ್. ಆರು ಮತ್ತು ಐದು ವರ್ಷ ಇಬ್ಬರು ಹೆಣ್ಣು ಮಕ್ಕಳಿಗೆ ಹುಟ್ಟಿನಿಂದಲೇ ಆರೋಗ್ಯ ಸಮಸ್ಯೆಗೆ ಕಾರಣವಾಗಿದ್ದ ಹೃದಯದಲ್ಲಿನ ರಂದ್ರಗಳನ್ನು ಶಸ್ತ್ರಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಮುಚ್ಚಿದ್ದಾರೆ ಎಂದರು.

ಬಿ.ಎಲ್.ಡಿ.ಇ ಸೂಪರ್ ಸ್ಪೇಷಾಲಿಟಿ ಕ್ಯಾಥ್ ಲ್ಯಾಬ್‌ನಲ್ಲಿ ಇದು ಮೊದಲ ಬಾರಿಗೆ ಈ ಕಾರ್ಯ ವಿಧಾನದ ಮೂಲಕ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಇದೀಗ ಇಬ್ಬರೂ ಮಕ್ಕಳು ಚೇತರಿಸಿಕೊಳ್ಳುತ್ತಿದ್ದು, ವೈದ್ಯರು ಮತ್ತು ಪೋಷಕರಲ್ಲಿ ಸಂತಸ ಮೂಡಿಸಿದೆ.

ಎ.ಬಿ.ಆರ್.ಕೆ ಯೋಜನೆಯಡಿ ಈ ಶಸ್ತ್ರಚಿಕಿತ್ಸೆಗಳನ್ನು ನೀಡಲಾಗಿದ್ದು, ಮಕ್ಕಳು ಮತ್ತು ಅವರ ಪೊಷಕರ ಪಾಲಿಗೆ ಈ ಆರೋಗ್ಯ ವಿಮೆ ವರದಾನವಾಗಿದೆ.

ವಿವಿಯ ಸಮಕುಲಾಧಿಪತಿ ಡಾ.ವೈ.ಎಂ.ಜೈರಾಜ್, ಉಪಕುಲಪತಿ ಡಾ. ಆರ್. ಎಸ್. ಮುಧೋಳ, ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ ಅವರ ಮಾರ್ಗದರ್ಶನದಲ್ಲಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಟಿ. ಕಲ್ಯಾಣಪ್ಪಗೋಳ ನೇತೃತ್ವದ ವೈದ್ಯರ ತಂಡ ಅರವಳಿಗೆ ನೀಡಿದರೆ, ಚಿಕ್ಕಮಕ್ಕಳ ತುರ್ತು ಚಿಕಿತ್ಸೆ ಘಟಕ(ಪಿಐಸಿಯು)ದ ಮುಖ್ಯಸ್ಖ ಡಾ. ಜೆ. ಪ್ರಕಾಶ, ಮಕ್ಕಳ ವಿಭಾಗದ ತಂಡ ಡಾ. ಎಸ್. ವಿ. ಪಾಟೀಲ, ಡಾ. ಎಸ್. ಎಸ್. ಕಲ್ಯಾಣಶೆಟ್ಟರ, ಡಾ. ಎಂ. ಎಂ. ಪಾಟೀಲ ಮತ್ತು ಸಿಬ್ಬಂದಿ ಈ ಶಸ್ತ್ರಚಿಕಿತ್ಸೆಯ ತಂಡದ ಭಾಗವಾಗಿ ಕಾರ್ಯ ನಿರ್ವಹಿಸಿದ್ದಾರೆ.

ಬಿ.ಎಲ್.ಡಿ.ಇ ಸಂಸ್ಥೆಯಲ್ಲಿ ಇದೇ ಮೊದಲ ಬಾರಿಗೆ ಈ ಶಸ್ತ್ರಚಿಕಿತ್ಸೆ ನಡೆದಿದೆ. ಭವಿಷ್ಯದಲ್ಲಿ ಮಕ್ಕಳಲ್ಲಿ ಜನ್ಮಜಾತ ಹೃದಯ ಸಂಬಂಧಿ ಕಾಯಿಲೆಗಳನ್ನು ನಿರ್ವಹಿಸಲು ಮತ್ತು ಆರೋಗ್ಯ ಯೋಜನೆಗಳ ಅಡಿಯಲ್ಲಿ ಉತ್ತರ ಕರ್ನಾಟಕದ ಬಡ ಮತ್ತು ನಿರ್ಗತಿಕರಿಗೆ ಗುಣಮಟ್ಟದ ಚಿಕಿತ್ಸೆ ಮತ್ತು ಆರೈಕೆ ಒದಗಿಸಲು ವಿಶ್ವವಿದ್ಯಾಲಯದ ಕುಲಾಧಿಪತಿ ಎಂ.ಬಿ.ಪಾಟೀಲ ವಿಶೇಷ ಕಾಳಜಿಯಿಂದಾಗಿ ಆಸ್ಪತ್ರೆಯ ಪಣತೊಟ್ಟು ನಿಂತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT