ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮುದ್ದೇಬಿಹಾಳ | ಗ್ಯಾಸ್ ಪೈಪ್ ಸೋರಿಕೆ: ಕಾರ್ಮಿಕನಿಗೆ ಗಾಯ

Published 9 ಮಾರ್ಚ್ 2024, 16:09 IST
Last Updated 9 ಮಾರ್ಚ್ 2024, 16:09 IST
ಅಕ್ಷರ ಗಾತ್ರ

ಮುದ್ದೇಬಿಹಾಳ: ಗ್ಯಾಸ್ ಪೈಪ್‌ನಲ್ಲಿ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಹಿನ್ನೆಲೆಯಲ್ಲಿ ಒಬ್ಬರಿಗೆ ಗಾಯವಾಗಿರುವ ಘಟನೆ ಪಟ್ಟಣದ ಬಸವೇಶ್ವರ ವೃತ್ತದ ಬಳಿ ಇರುವ ಬೇಕರಿಯೊಂದರಲ್ಲಿ ಶನಿವಾರ ಸಂಜೆ ನಡೆದಿದೆ.

ಹಾಸನ ಮೂಲದ ಕಿರಣ್ (30) ಈತನಿಗೆ ಸಣ್ಣಪುಟ್ಟ ಸುಟ್ಟಿರುವ ಗಾಯಗಳಾಗಿವೆ. ಬೇಕರಿ ಅಂಗಡಿಯ ಕೆಳಮಹಡಿಯಲ್ಲಿ ಬೇಕರಿ ಪದಾರ್ಥ ತಯಾರಿಸುವ ವೇಳೆ ಗ್ಯಾಸ್‌ಗೆ ಅಳವಡಿಸಿದ್ದ ಪೈಪ್‌ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ತಗುಲಿದೆ. ಕೂಡಲೇ ಅಲ್ಲಿಂದ ಕಾರ್ಮಿಕ ಕಿರಣ್ ಗ್ಯಾಸ್ ಬಂದ್ ಮಾಡಿ, ಹೊರಗೆ ಓಡಿ ಬಂದಿದ್ದಾನೆ. ಸಣ್ಣಪುಟ್ಟ ಗಾಯಗಳಿಂದ ಬಳಲುತ್ತಿದ್ದ ಕಿರಣ್‌ಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಆಸ್ಪತ್ರೆಯ ವೈದ್ಯ ಡಾ.ಹಸನ್ ಬೀಳಗಿ ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ಕಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಗ್ನಿಶಾಮಕ ಠಾಣೆಯ ಅಧಿಕಾರಿ ರಮೇಶ ಚಾಳಣ್ಣವರ, ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ,ಅನಾಹುತ ತಪ್ಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT