ವಿಜಯಪುರ: ‘ಚುನಾವಣಾ ಆಯೋಗವು ಚುನಾವಣೆ ಕುರಿತ ‘ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ’ ಧ್ಯೇಯವಾಕ್ಯವನ್ನು ಜ.25 ರಂದು ಕಚೇರಿಗಳ ಪತ್ರ ವ್ಯವಹಾರಗಳಲ್ಲಿ ಬಳಕೆ ಮಾಡಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ 15ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಸರ್ಕಾರಿ ಹಾಗೂ ಅಧೀನ ಕಚೇರಿಗಳಲ್ಲಿ ಜ.25 ರಂದು ಬೆಳಿಗ್ಗೆ 11ಕ್ಕೆ ಮತದಾರರ ಪ್ರತಿಜ್ಞಾ ವಿಧಿ ಬೋಧಿಸುವುದರ ಜೊತೆಗೆ ಛಾಯಾಚಿತ್ರ ತೆಗೆದು ಪ್ರಚಾರ ಪಡಿಸಬೇಕು. ಸಾಮಾಜಿಕ ಸೇವಾ ಸಂಸ್ಥೆಗಳು, ಯುವ ಸ್ವಯಂ ಸೇವಾ ಸಂಸ್ಥೆಗಳು, ಎನ್.ಎಸ್.ಎಸ್, ಎನ್.ಸಿ.ಸಿ, ಸ್ಕೌಟ್ ಮತ್ತು ಗೈಡ್ಸ್, ನೆಹರೂ ಯುವ ಕೇಂದ್ರಗಳಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು’ ಎಂದರು.

‘ವೇದಿಕೆ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಬೇಕು. ಜಾಥಾ ಕಾರ್ಯಕ್ರಮ, ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಚುನಾವಣೆಯ ಮತದಾನ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಬೇಕು. ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಲು ಕ್ರಮ ವಹಿಸಬೇಕು’ ಎಂದರು.

ಹುತಾತ್ಮ ದಿನಾಚರಣೆ ಜ.30ಕ್ಕೆ: ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದ ಮಹನೀಯರ ಸ್ಮರಣಾರ್ಥ ಜ.30 ರಂದು ಜಿಲ್ಲಾಡಳಿತದಿಂದ ಬೆಳಿಗ್ಗೆ 11ಕ್ಕೆ ವಿಜಯಪುರದ ಮೀನಾಕ್ಷಿ ಚೌಕ್ನಲ್ಲಿ ಆಚರಿಸಲು ನಿರ್ಧರಿಸಲಾಯಿತು.

‘ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಭಾಷಣ, ಚರ್ಚೆಗಳನ್ನು ಏರ್ಪಡಿಸುವುದು, ಸರ್ವಧರ್ಮ ಭಜನೆ ಕಾರ್ಯಕ್ರಮ ಆಯೋಜಿಸಲು ಕ್ರಮ ವಹಿಸಬೇಕು’ ಎಂದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆ ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.