ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಲಸಿಕೆ ಶೀಘ್ರ ಪಡೆಯಿರಿ: ಡಿಸಿ ಮನವಿ

Last Updated 22 ಸೆಪ್ಟೆಂಬರ್ 2021, 16:02 IST
ಅಕ್ಷರ ಗಾತ್ರ

ವಿಜಯಪುರ: ಇದುವರೆಗೂ ಕೋವಿಡ್‌ ಲಸಿಕೆ ಪಡೆಯದವರು ಶೀಘ್ರವಾಗಿ ಲಸಿಕೆ ಹಾಕಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್‌ ಮನವಿ ಮಾಡಿದರು.

ಬುಧವಾರ ನಡೆದ ಕೋವಿಡ್-19 ಉಚಿತ ಲಸಿಕಾಕರಣದ ಮೇಳ ವೀಕ್ಷಿಸಿದ ಬಳಿಕ ಅವರು ಮಾತನಾಡಿದರು.

ಬುಧವಾರ ನಡೆದ ಮೇಳದಲ್ಲಿ ಒಟ್ಟು 40 ಸಾವಿರ ಲಸಿಕೆಯನ್ನು ನೀಡುವ ಗುರಿ ಸರಕಾರದಿಂದ ನಿಗದಿಪಡಿಸಲಾಗಿ, ಜಿಲ್ಲೆಯಲ್ಲಿ ಮಧ್ಯಾಹ್ನ 4ರ ವರೆಗೆ ಶೇ 109 ರಷ್ಟು ಲಸಿಕಾ ಪ್ರಗತಿ ಸಾಧಿಸಲಾಗಿದೆ ಎಂದರು.

ಲಸಿಕಾಕರಣ ಹೆಚ್ಚು ಪ್ರಗತಿ ಸಾಧಿಸಲು ಸಹಕರಿಸುತ್ತಿರುವ ಆರೋಗ್ಯ ಇಲಾಖೆ, ಪಂಚಾಯತ್‌ ರಾಜ್ ಇಲಾಖೆ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಾನಗರ ಪಾಲಿಕೆ, ಪುರಸಭೆ, ಪಟ್ಟಣ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ, ಸಿಬ್ಬಂದಿ ಕಾರ್ಯಕ್ಕೆ ಹಾಗೂ ವಿವಿಧ ಎನ್.ಜಿ.ಓ ಗಳ ಸಹಕಾರಕ್ಕೆ ಜಿಲ್ಲಾಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿದರು.

ಲಸಿಕೆ ನೀಡುವ ಕೇಂದ್ರಗಳಲ್ಲಿ ಸಿಬ್ಬಂದಿ ಕೊರತೆಯಾಗದಂತೆ ಹಾಗೂ ಲಸಿಕಾಕರಣದಲ್ಲಿ ಗುರಿಗೆ ತಕ್ಕಂತೆ ಪ್ರಗತಿ ಸಾಧಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ್ ಕಳಸದ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಡಾ ಮಹೇಶ್ ನಾಗರಬೆಟ್ಟ, ಡಾ. ಕವಿತಾ ದೊಡ್ಡಮನಿ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT