ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ | ಪೋಕ್ಸೊ ಪ್ರಕರಣ ಕೂಡಲೇ ಇತ್ಯರ್ಥಗೊಳಿಸಿ: ಭಾರತಿ ವಾಳ್ವೆಕರ

ಮಕ್ಕಳ ರಕ್ಷಣಾ ಆಯೋಗದ ಸದಸ್ಯೆ ಭಾರತಿ ವಾಳ್ವೆಕರ ಸೂಚನೆ
Last Updated 23 ನವೆಂಬರ್ 2020, 17:09 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲೆಯಲ್ಲಿ ಪೋಕ್ಸೊ ಕಾಯ್ದೆ ಹಾಗೂ ಬಾಲ್ಯವಿವಾಹ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣಗಳನ್ನು ಕೂಡಲೇ ಇತ್ಯರ್ಥಗೊಳಿಸಬೇಕು ಎಂದು ಮಕ್ಕಳ ರಕ್ಷಣಾ ಆಯೋಗದ ಸದಸ್ಯೆ ಭಾರತಿ ವಾಳ್ವೆಕರ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸಹಯೋಗದೊಂದಿಗೆ ನಡೆದ ಬಾಲನ್ಯಾಯ (ಪೋಷಣೆ ಹಾಗೂ ರಕ್ಷಣೆ) ಕಾಯ್ದೆ-2015, ಪೋಕ್ಸೊ ಕಾಯ್ದೆ -2012, ಆರ್‌ಟಿಇ ಕಾಯ್ದೆ -2019 ಮತ್ತು ಶಾಲೆ ಬಿಟ್ಟ ಮಕ್ಕಳ ಮಕ್ಕಳ ಕುರಿತು ಅಧಿಕಾರಿಗಳೊಂದಿಗಿನ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

ವಿವಿಧ ಬಾಲಮಂದಿರಗಳಲ್ಲಿ ದಾಖಲಾದ ಮಕ್ಕಳ, ಶಿಕ್ಷಕರ ಸಂಖ್ಯೆ ಹಾಗೂ ಸಮರ್ಪಕ ಮಾಹಿತಿ ಒದಗಿಸಬೇಕು ಹಾಗೂ ಬಿಡುಗಡೆಗೊಂಡ ಮಕ್ಕಳ ಸ್ಥಿತಿಗತಿ ಪರಿಶೀಲಿಸುವಂತೆ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮಗಳಲ್ಲಿ ಮಕ್ಕಳ ಗ್ರಾಮ ಸಭೆಗಳನ್ನು ಏರ್ಪಡಿಸಿ, ಮಕ್ಕಳ ಸಮಸ್ಯೆ, ಬೇಡಿಕೆ ಆಲಿಸಿ ಅದರ ವರದಿ ಸಲ್ಲಿಸುವಂತೆ ತಿಳಿಸಿದರು.

ಬಾಲ್ಯ ವಿವಾಹ ತಡೆ ಕಾಯ್ದೆಯ ಬಗ್ಗೆಯೂ ವ್ಯಾಪಕ ಪ್ರಚಾರ, ಅರಿವು ಕಾರ್ಯಕ್ರಮಗಳನ್ನು ಆಯೋಜಿಸವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಶಾಲೆ ಬಿಟ್ಟ ಮಕ್ಕಳ ಮಾಹಿತಿಯನ್ನು ಸಮರ್ಪಕವಾಗಿ ಒದಗಿಸುವುದರ ಜೊತೆಗೆ ಆಯಾ ಶಾಲೆಗಳ ಶಿಕ್ಷಕರ ಮಾಹಿತಿ ಹಾಗೂ ಶಾಲೆಗಳ ಮೂಲ ಸೌಕರ್ಯಗಳ ಬಗ್ಗೆ ಸರಿಯಾದ ವರದಿ ಸಲ್ಲಿಸುವಂತೆ ತಿಳಿಸಿದರು.

ಶಾಲೆಗಳಕಂಪೌಂಡ್‌ ಮೇಲೆ ಕಡ್ಡಾಯವಾಗಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಬರೆಸುವಂತೆ ಸೂಚಿಸಿದರು.

ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ಜಿಲ್ಲಾ ಪಂಚಾಯ್ತಿ ಯೋಜನಾಧಿಕಾರಿ ದೇವರಮನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಕೆ ಚವ್ಹಾಣ, ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣಾಧಿಕಾರಿ ಮಹೇಂದ್ರ ಕಾಪಸೆ, ತಹಶೀಲ್ದಾರ್‌ ಮೋಹನಕುಮಾರಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಿರ್ಮಲಾ ಸುರಪುರ, ಡಿಯುಡಿಸಿ ಯೋಜನಾ ನಿರ್ದೇಶಕ ಮೆಕ್ಕಳಕಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT