ಭಾನುವಾರ, ಸೆಪ್ಟೆಂಬರ್ 19, 2021
30 °C

ಸಚಿವೆ ಶಶಿಕಲಾ ಜೊಲ್ಲೆಗೆ ಘೇರಾವ್‌, ಕಪ್ಪು ಬಟ್ಟೆ ಪ್ರದರ್ಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ನಗರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಆವರಣದಲ್ಲಿ ಜಿಲ್ಲಾಡಳಿತ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಮುಜರಾಯಿ, ಹಜ್ ಮತ್ತು ವಕ್ಪ್ ಸಚಿವೆ ಶಶಿಕಲಾ ಜೊಲ್ಲೆ ವೇದಿಕೆಗೆ ಆಗಮಿಸುತ್ತಿದ್ದ ವೇಳೆ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು, ವಿವಿಧ ಮಹಿಳಾ ಸಂಘಟನೆಗಳ ಪದಾಧಿಕಾರಿಗಳು ಘೇರಾವ್ ಹಾಕಿದರು.

‘ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಸಚಿವೆ ಧ್ವಜಾರೋಹಣ ನೆರವೇರಿಸುವುದು ಮಾಡುವುದು ಬೇಡ’, ‘ಸಚಿವೆ ಜೊಲ್ಲೆಗೆ ಧಿಕ್ಕಾರ’ ಎಂಬ ಘೋಷಣೆಗಳನ್ನು ಕೂಗಿ, ಕಪ್ಪು ಬಟ್ಟೆ ಪ್ರದರ್ಶಿಸಿದರು.

ತಕ್ಷಣ ಪೊಲೀಸರು ಪ್ರತಿಭಟನಾಕಾರರನ್ನು ತಡೆದು, ವಶಕ್ಕೆ ಪಡೆದರು. ಕೆಲ ಸಮಯದ ಬಳಿಕ ಅವರನ್ನು ಬಿಡುಗಡೆಗೊಳಿಸಿದರು.

ಯಾವುದೇ ತಪ್ಪು ಮಾಡಿಲ್ಲ: ‘ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಏಳಿಗೆಯನ್ನು ಸಹಿಸದ ಶತೃಗಳು ಮತ್ತು ಹಿತ ಶತೃಗಳು ದುರುದ್ದೇಶದಿಂದ ಷಡ್ಯಂತ್ರ ರೂಪಿಸಿದ್ದಾರೆ. ಆದರೆ, ನಾನು ಈ ಷಡ್ಯಂತ್ರಕ್ಕೆ ಬಲಿಯಾಗಿಲ್ಲ. ಯಾವುದೇ ತನಿಖೆಗೂ ಸಿದ್ಧ’ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಅಕ್ಕಮಹಾದೇವಿ ಅವರ ‘ಬೆಟ್ಟದ ಮೇಲೊಂದು ಮನೆಯ ಮಾಡಿ’ ವಚನವನ್ನು ವಾಚಿಸಿ, ‘ಸಾರ್ವಜನಿಕ ಜೀವನದಲ್ಲಿ ಸ್ತುತಿ, ನಿಂದನೆ ಸಹಜ. ಶಾಂತವಾಗಿ, ಧೈರ್ಯದಿಂದ ಎದುರಿಸುತ್ತೇನೆ’ ಎಂದರು.

ರಾಜಕೀಯದಲ್ಲಿ ಮಹಿಳೆಯರನ್ನು ನೋಡುವ ದೃಷ್ಟಿಯೇ ಬೇರೆಯಾಗಿರುವ ಈ ಸಂದರ್ಭದಲ್ಲಿ ಸ್ವಸಾಮಾರ್ಥ್ಯದಿಂದ ಕಷ್ಟಪಟ್ಟು ಮೇಲೆ ಬಂದಿದ್ದೇನೆ. ತಪ್ಪೇ ಮಾಡದಿರುವಾಗ ಅಂಜುವುದಿಲ್ಲ

– ಶಶಿಕಲಾ ಜೊಲ್ಲೆ, ಮುಜರಾಯಿ ಸಚಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು