ಶನಿವಾರ, ಜೂಲೈ 4, 2020
24 °C

ಕೊರೊನಾ ಲಾಕ್‌ಡೌನ್‌ | ವಿಜಯಪುರ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಕೊರೊನಾ ಲಾಕ್‌ಡೌನ್‌ಗೆ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಉತ್ತಮ ಸ್ಪಂದನೆ ದೊರೆತಿದೆ. ಶನಿವಾರ ಸಂಜೆ 7ರಿಂದ ಆರಂಭಗೊಂಡು ಸೋಮವಾರ ಬೆಳಿಗ್ಗೆ 7 ವರೆಗಿನ ಸಂಪೂರ್ಣ ಲಾಕ್‌ಡೌನ್ ಹಿನ್ನೆಲೆಯಲ್ಲಿ ಜಿಲ್ಲೆ ಸಂಪೂರ್ಣ ಸ್ತಬ್ಧ ಆಗಿದೆ.

ಬಸ್, ಅಟೊ ಸೇರಿದಂತೆ ಬಹುತೇಕ ವಾಹನಗಳ ಸಂಚಾರ ಸ್ಥಗಿತಗೊಂಡಿವೆ. ಅಂಗಡಿ, ಬೇಕರಿ, ಸ್ವೀಟ್ ಹೌಸ್ ಹೋಟೆಲ್‌ಗಳೂ ಬಂದ್ ಆಗಿವೆ. ಹಾಲು, ಔಷಧ ಸೇರಿದಂತೆ ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.  ಕೋಳಿ, ಕುರಿ ಮಾಂಸ ಮತ್ತು ಮೀನು ಮಾರಾಟ ನಡೆದಿದೆ. ಸೋಮವಾರ ಈದ್ ಉಲ್ ಫಿತರ್ ಇರುವುದರಿಂದ ಕುರಿ, ಕೋಳಿ ಮಾಂಸ ಮಾರಾಟದ ಅಂಗಡಿಗಳ ಎದುರು ಹೆಚ್ಚಿನ ಜನರು ಕಂಡುಬಂದರು.

ಪೊಲೀಸರು ನಗರದ ಅಲ್ಲಲ್ಲಿ ಚೆಕ್‌ಪೋಸ್ಟ್ ಹಾಕಿದ್ದು, ಅನಗತ್ಯವಾಗಿ ವಾಹನಗಳಲ್ಲಿ ಓಡಾಡುವವರನ್ನು ತಡೆದು, ಮರಳಿ ಕಳುಹಿಸಿದರು. ಕೆಲವರಿಗೆ ಎಚ್ಚರಿಕೆ ನೀಡಿ ಕಳುಹಿಸಿದರು. ಸೊಲ್ಲಾಪುರ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ ಮತ್ತು ವಿಜಯಪುರ-ಹುಬ್ಬಳ್ಳಿ ಹೆದ್ದಾರಿಯಲ್ಲೂ ವಾಹನಗಳ ಸಂಚಾರ ವಿರಳವಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು