ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ | ಸಂಕಷ್ಟದಲ್ಲೂ ನ್ಯಾಯ ಒದಗಿಸಿದ ಸರ್ಕಾರ: ಶಶಿಕಲಾ ಜೊಲ್ಲೆ ಮೆಚ್ಚುಗೆ

ಜಿಲ್ಲಾ ಉಸ್ತುವಾರಿ ಸಚಿವೆ
Last Updated 27 ಜುಲೈ 2020, 15:28 IST
ಅಕ್ಷರ ಗಾತ್ರ

ವಿಜಯಪುರ: ಬರ,ನೆರೆಹಾಗೂ ಕೋವಿಡ್‍ಗಳಂತಹ ಸಂಕಷ್ಟದ ಪರಿಸ್ಥಿತಿಗಳಲ್ಲಿ ರಾಜ್ಯ ಸರ್ಕಾರ ಎಲ್ಲ ವರ್ಗಗಳಿಗೆ ನ್ಯಾಯ ಒದಗಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರರಾಜ್ಯಸರ್ಕಾರದ ಒಂದು ವರ್ಷದ ಸಾಧನೆ ಹಿನ್ನೆಲೆಯಲ್ಲಿ ವಿವಿಧ ಫಲಾನುಭವಿಗಳೊಂದಿಗೆ ನಡೆದ ಮುಖ್ಯಮಂತ್ರಿಗಳ ವಿಡಿಯೊ ಸಂವಾದ ಕಾರ್ಯಕ್ರಮದ ನಂತರ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಒಂಬತ್ತು ಖಾಸಗಿ ಆಸ್ಪತ್ರೆಗಳು ಕೋವಿಡ್ ಚಿಕಿತ್ಸೆಗೆ ಮುಂದೆ ಬಂದಿವೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ನಿಗದಿತಶುಲ್ಕಪಾವತಿಸುವಕುರಿತಂತೆ ಶೀಘ್ರದಲ್ಲೇ ರಾಜ್ಯ ಸರ್ಕಾರದಿಂದ ಆದೇಶ ಹೊರಬೀಳಲಿದೆ. ಸಾರ್ವಜನಿಕರಿಂದ ಹೆಚ್ಚಿನ ಚಿಕಿತ್ಸಾ ವೆಚ್ಚ ಪಡೆಯುತ್ತಿರುವಂತಹ ದೂರುಗಳಿಗೆ ಕಡಿವಾಣ ಬೀಳಲಿದೆ ಎಂದು ಹೇಳಿದರು.

ನೇರ ಸಂವಾದ

ಕೋವಿಡ್‌ನಿಂದ ಗುಣಮುಖರಾದವಿಜಯಪುರ ನಗರದ ಎಂಟು ತಿಂಗಳ ಗರ್ಭಿಣಿ ಪದ್ಮಶ್ರೀ ವನಕುದುರೆ ಅವರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಪ್ರಥಮವಾಗಿ ನೇರ ಸಂವಾದ ನಡೆಸಿದರು.

ಜಿಲ್ಲಾಡಳಿತ, ಆರೋಗ್ಯ ಸಿಬ್ಬಂದಿ ಮತ್ತು ವೈದ್ಯರು ನೀಡಿರುವ ಸಹಕಾರದ ಬಗ್ಗೆ ಪದ್ಮಶ್ರೀ ಸಂತಸ ವ್ಯಕ್ತಪಡಿಸಿದರು.

ಕಿರುಹೊತ್ತಿಗೆ ಬಿಡುಗಡೆ

ಸರ್ಕಾರದ ಒಂದು ವರ್ಷದ ಸಾಧನೆಗೆ ಸಂಬಂಧಿಸಿದಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಹೊರತಂದಿರುವ ಕಿರುಹೊತ್ತಿಗೆಯಾದ ‘ಸವಾಲುಗಳ ಒಂದು ವರ್ಷ; ಪರಿಹಾರದ ಸ್ಪರ್ಶ’ ಪುಸ್ತಕವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರು ಬಿಡುಗಡೆ ಮಾಡಿದರು.

ಶಾಸಕ ಸೋಮನಗೌಡ ಪಾಟೀಲ (ಸಾಸನೂರ), ದೇವಾನಂದ ಚೌಹಾಣ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಹೆಚ್ಚುವರಿ ಜಿಲಾಧಿಕಾರಿ ಡಾ.ಔದ್ರಾಮ್, ತಹಶೀಲ್ದಾರ್‌ ಮೋಹನ್ ಕುಮಾರಿ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಂಡ ಫಲಾನುಭವಿಗಳು, ಕೋವಿಡ್‍ದಿಂದ ಗುಣಮುಖರಾದವರು, ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT