ಶುಕ್ರವಾರ, ಜುಲೈ 1, 2022
28 °C
ಬಸವನ ಬಾಗೇವಾಡಿ ತಾಲ್ಲೂಕು ಆಸ್ಪತ್ರೆಗೆ ದ್ವಿತೀಯ ಸ್ಥಾನ

ವಿಜಯಪುರ: 20 ಸರ್ಕಾರಿ ಆಸ್ಪತ್ರೆಗಳಿಗೆ ‘ಕಾಯಕಲ್ಪ ಪ್ರಶಸ್ತಿ’ ಗರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಜಿಲ್ಲೆಯ 20 ಆಸ್ಪತ್ರೆಗಳಿಗೆ 2020-21 ನೇ ಸಾಲಿನಲ್ಲಿ ಸಾರ್ವಜನಿಕ ಆರೋಗ್ಯ ಸಂಸ್ಥೆಗಳಿಗೆ ಸ್ವಚ್ಛತೆ, ಶುಚಿತ್ವ ಮತ್ತು ನೈರ್ಮಲ್ಯಕ್ಕಾಗಿ ನೀಡುವ ‘ಕಾಯಕಲ್ಪ ಪ್ರಶಸ್ತಿ’ ಲಭಿಸಿದೆ.

ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಉತ್ತಮ ವಾತಾವರಣ ನಿರ್ಮಿಸಿಕೊಡುವ ಆಸ್ಪತ್ರೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಕಾಯಕಲ್ಪ ಪ್ರಶಸ್ತಿಯನ್ನು 2015 ರಿಂದ ನೀಡಲಾಗುತ್ತಿದೆ.

2019-20ನೇ ಸಾಲಿನಲ್ಲಿ ಜಿಲ್ಲೆಯ 15 ಆಸ್ಪತ್ರೆಗಳು ಕಾಯಕಲ್ಪ ಪ್ರಶಸ್ತಿಯನ್ನು ಪಡೆದಿದ್ದರೆ, 2020-21ನೇ ಸಾಲಿನಲ್ಲಿ  20 ಆಸ್ಪತ್ರೆಗಳು ಕಾಯಕಲ್ಪ ಪ್ರಶಸ್ತಿ ಪಡೆದಿವೆ.

ಸಮುದಾಯ ಆರೋಗ್ಯ ಕೇಂದ್ರ ಮತ್ತು ತಾಲ್ಲೂಕು ಆಸ್ಪತ್ರೆಗಳ ವಿಭಾಗದಲ್ಲಿ ಬಸವನ ಬಾಗೇವಾಡಿ ತಾಲ್ಲೂಕು ಆಸ್ಪತ್ರೆಯು ರಾಜ್ಯ ಮಟ್ಟದಲ್ಲಿ ದ್ವಿತಿಯ ಸ್ಥಾನ ಪಡೆದುಕೊಂಡರೆ, ಹೊರ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಸತತ ಎರಡನೇ ಸಲ ಜಿಲ್ಲೆಯ ಅತ್ಯುತ್ತಮ ಪ್ರಾಥಮಿಕ ಆರೋಗ್ಯ ಕೇಂದ್ರ ಕಾಯಕಲ್ಪ ಪ್ರಶಸ್ತಿ ಪಡೆದಿದೆ.

ಜಿಲ್ಲಾ ಆಸ್ಪತ್ರೆ ವಿಭಾಗದಲ್ಲಿ ವಿಜಯಪುರ ಜಿಲ್ಲಾ ಆಸ್ಪತ್ರೆ ಸಮಾಧಾನಕರ ಪ್ರಶಸ್ತಿ ಪಡೆದಿದೆ. ಸಮುದಾಯ ಆರೋಗ್ಯ ಕೇಂದ್ರಗಳಾದ ಚಡಚಣ, ಕಾಳಗಿ, ತಡವಲಗ, ನಾಲತವಾಡ, ನಿಡಗುಂದಿ ಮತ್ತು ಆಲಮೇಲ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಸಮಾಧಾನಕರ ಪ್ರಶಸ್ತಿ ಲಭಿಸಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರ ವಿಭಾಗದಲ್ಲಿ ಶಿವಣಗಿ, ಹೊನವಾಡ, ಮನಗೂಳಿ, ಗೊಳಸಂಗಿ, ಹೂವಿನ ಹಿಪ್ಪರಗಿ, ಇನಚಗಲ್, ಕೂಡಗಿ ಮತ್ತು ರೋಣಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಮಾಧಾನಕರ ಕಾಯಕಲ್ಪ ಪ್ರಶಸ್ತಿ  ಪಡೆದಿವೆ.

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವಿಭಾಗದಲ್ಲಿ ವಿಜಯಪುರದ ದರ್ಗಾ, ಶಾಂತಿನಗರ ಮತ್ತು ತಾಜ್‌ಬಾವಡಿ  ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಮಾಧಾನಕರ ಪ್ರಶಸ್ತಿ ಪಡೆದಿವೆ.

ಪ್ರಶಸ್ತಿ ವಿಜೇತ ಎಲ್ಲ ಆರೋಗ್ಯ ಸಂಸ್ಥೆಗಳಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜಕುಮಾರ್‌ ಯರಗಲ್ ಮತ್ತು ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜೇಶ್ವರಿ ಗೋಲಗೇರಿ ಅಭಿನಂದನೆ ಸಲ್ಲಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು