ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮ ಪಂಚಾಯತ್ ಚುನಾವಣೆ: ಶಸ್ತ್ರಾಸ್ತ್ರ ಲೈಸನ್ಸ್ ರದ್ದು

Last Updated 2 ಡಿಸೆಂಬರ್ 2020, 14:51 IST
ಅಕ್ಷರ ಗಾತ್ರ

ವಿಜಯಪುರ: ಗ್ರಾಮ ಪಂಚಾಯ್ತಿ ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಆಯುಧ ಲೈಸನ್ಸ್‌ದಾರರು ತಮ್ಮ ಬಂದೂಕು, ರೈಫಲ್, ರಿವಾಲ್ವರ್ ಹಾಗೂ ಪಿಸ್ತೂಲ್‍ಗಳ ಲೈಸನ್ಸ್‌ ಗಳನ್ನು ನ.30ರಿಂದ ಆರಂಭಗೊಂಡು ಡಿ. 31ರ ವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಶಸ್ತ್ರಾಸ್ತ್ರ ಹೊಂದಿದವರು ತಕ್ಷಣವೇ ಸಮೀಪದ ಪೊಲೀಸ್ ಠಾಣೆಯಲ್ಲಿ ಎಲ್ಲ ಶಸ್ತ್ರಾಸ್ತ್ರಗಳನ್ನು ಮತ್ತು ಮದ್ದು ಗುಂಡುಗಳನ್ನು ಒಪ್ಪಿಸಬೇಕು ಎಂದು ಸೂಚಿಸಿದ್ದಾರೆ.

ಈ ಆದೇಶವು ಬ್ಯಾಂಕುಗಳು ಮತ್ತು ಫ್ಯಾಕ್ಟರಿಗಳು ಭದ್ರತೆಗೋಸ್ಕರ ತೆಗೆದುಕೊಂಡಿರುವ ಆಯುಧಗಳಿಗೆ ಅನ್ವಯಿಸುವುದಿಲ್ಲ. ಅದೇ ರೀತಿ ಪಟ್ಟಣ ಪಂಚಾಯ್ತಿ, ಪುರಸಭೆ, ನಗರಸಭೆ, ನಗರಪಾಲಿಕೆ, ಮಹಾನಗರ ಪಾಲಿಕೆ ಪ್ರದೇಶಗಳಿಗೆ ಅನ್ವಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಪೊಲೀಸ್ ಇಲಾಖೆಯು ತಮ್ಮಲ್ಲಿ ತಂದಿರಿಸಿದ ಶಸ್ತ್ರಾಸ್ತ್ರಗಳನ್ನು ಸುರಕ್ಷಿತವಾಗಿ ಸಂಗ್ರಹಿಸಿಡಬೇಕು. ಶಸ್ತ್ರಾಸ್ತ್ರಗಳನ್ನು ತಂಡಿಡುವ ಲೈಸನ್ಸ್‌ದಾರರಿಗೆ ಸೂಕ್ತ ರಸೀದಿಯನ್ನು ನೀಡಬೇಕು ಎಂದು ಅವರು ತಿಳಿಸಿದ್ದಾರೆ.

ನಿಗದಿತ ಅವಧಿಯೊಳಗೆ ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರಗಳನ್ನು ನೀಡದೇ ಇದ್ದಲ್ಲಿ ಒಂದು ವರ್ಷದಿಂದ ಮೂರು ವರ್ಷದವರೆಗೆ ಜೈಲುವಾಸ, ದಂಡ ಅಥವಾ ಎರಡೂ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಬಕಾರಿ ಕಂಟ್ರೋಲ್ ರೂಂ ಆರಂಭ

ವಿಜಯಪುರ: ಗ್ರಾಮ ಪಂಚಾಯ್ತಿ ಚುನಾವಣೆ ಹಿನ್ನೆಲೆಯಲ್ಲಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟಲು ಜಿಲ್ಲಾ ವ್ಯಾಪ್ತಿಯಲ್ಲಿ ಅಬಕಾರಿ ಕಂಟ್ರೋಲ್ ರೂಂಗಳನ್ನು ಸ್ಥಾಪಿಸಲಾಗಿದೆ ಎಂದು ಅಬಕಾರಿ ಉಪ ಆಯುಕ್ತ ಕೆ.ಅರುಣಕುಮಾರ್ ತಿಳಿಸಿದ್ದಾರೆ.

ಕೇಂದ್ರದ ವಿವರ: ಕೆ.ಅರುಣಕುಮಾರ, ಅಬಕಾರಿ ಉಪ ಆಯುಕ್ತರು, ಮೊ: 9449597164, ಮಹಾದೇವ ಪೂಜಾರಿ, ಅಬಕಾರಿ ನಿರೀಕ್ಷಕರು : 9535479446 ಹಾಗೂ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ : 08352-244602 ಆಗಿರುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT