ಗ್ರಾಮ ಪಂಚಾಯಿತಿ ಚುನಾವಣೆ ಮೊದಲ ಹಂತ: ವಿಜಯಪುರದಲ್ಲಿ 4501 ನಾಮಪತ್ರ ಸಲ್ಲಿಕೆ

ವಿಜಯಪುರ: ಜಿಲ್ಲೆಯಲ್ಲಿ ಡಿ.22ರಂದು ನಡೆಯುವ ಮೊದಲ ಹಂತದ ಗ್ರಾಮ ಪಂಚಾಯ್ತಿ ಚುನಾವಣೆಗೆ ಒಟ್ಟು 4501 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.
ಡಿ.7ರಿಂದ 11ರ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿತ್ತು. ವಿಜಯಪುರ ತಾಲ್ಲೂಕಿನ ಗ್ರಾಮ ಪಂಚಾಯ್ತಿಗಳಿಗೆ 713, ಬಬಲೇಶ್ವರ ತಾಲ್ಲೂಕಿನ ಗ್ರಾಮ ಪಂಚಾಯ್ತಿಗಳಿಗೆ 831, ತಿಕೋಟಾ ತಾಲ್ಲೂಕಿನ ಗ್ರಾಮ ಪಂಚಾಯ್ತಿಗಳಿಗೆ 669, ಬಸವನ ಬಾಗೇವಾಡಿ ತಾಲ್ಲೂಕಿನ ಗ್ರಾಮ ಪಂಚಾಯ್ತಿಗಳಿಗೆ 720, ನಿಡಗುಂದಿ ತಾಲ್ಲೂಕಿನ ಗ್ರಾಮ ಪಂಚಾಯ್ತಿಗಳಿಗೆ 308, ಕೊಲ್ಹಾರ ತಾಲ್ಲೂಕಿನ ಗ್ರಾಮ ಪಂಚಾಯ್ತಿಗಳಿಗೆ 301, ಮುದ್ದೇಬಿಹಾಳ ತಾಲ್ಲೂಕಿನ ಗ್ರಾಮ ಪಂಚಾಯ್ತಿಗಳಿಗೆ 483, ತಾಳಿಕೋಟೆ ತಾಲ್ಲೂಕಿನ ಗ್ರಾಮ ಪಂಚಾಯ್ತಿಗಳಿಗೆ 476 ಸೇರಿದಂತೆ ಒಟ್ಟು 4501 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಅವರು ತಿಳಿಸಿದ್ದಾರೆ.
ಎರಡನೆ ಹಂತಕ್ಕೆ 295 ನಾಮಪತ್ರಗಳು ಸಲ್ಲಿಕೆ:
ಜಿಲ್ಲೆಯಲ್ಲಿ ಡಿ.27ರಂದು ನಡೆಯುವ ಎರಡನೇ ಹಂತದ ಗ್ರಾಮ ಪಂಚಾಯ್ತಿ ಚುನಾವಣೆಗೆ ಸಂಬಂಧಿಸಿದಂತೆ ವಿವಿಧ ಗ್ರಾಮ ಪಂಚಾಯತಿಗಳಿಗೆ ಶುಕ್ರವಾರ 295 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪಿ.ಸುನೀಲ ಕುಮಾರ್ ತಿಳಿಸಿದ್ದಾರೆ.
ಇಂಡಿ ತಾಲ್ಲೂಕಿನ ಗ್ರಾಮ ಪಂಚಾಯ್ತಿಗಳಿಗೆ 144, ಚಡಚಣ ತಾಲ್ಲೂಕಿನ ಗ್ರಾಮ ಪಂಚಾಯ್ತಿಗಳಿಗೆ 48, ಸಿಂದಗಿ ತಾಲ್ಲೂಕಿನ ಗ್ರಾಮ ಪಂಚಾಯ್ತಿಗಳಿಗೆ 90, ದೇವರ ಹಿಪ್ಪರಗಿ ತಾಲ್ಲೂಕಿನ ಗ್ರಾಮ ಪಂಚಾಯ್ತಿಗಳಿಗೆ 13 ಸೇರಿದಂತೆ ಒಟ್ಟು 295 ಗ್ರಾಮ ಪಂಚಾಯತಗಳಿಗೆ ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಅವರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.