ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿಜಯಪುರ: ಪೇಜಾವರ ಶ್ರೀಗಳ ಭವ್ಯ ಶೋಭಾ ಯಾತ್ರೆ

Published 5 ಜುಲೈ 2024, 16:26 IST
Last Updated 5 ಜುಲೈ 2024, 16:26 IST
ಅಕ್ಷರ ಗಾತ್ರ

ವಿಜಯಪುರ: ಅಯೋಧ್ಯೆಯಲ್ಲಿ ಬಾಲರಾಮನ ಪ್ರತಿಷ್ಠಾಪನೆಯಲ್ಲಿ ಪಾಲ್ಗೊಂಡು ಬಂದಿರುವ ಉಡುಪಿ ಪೇಜಾವರ ಮಠದ ಪೀಠಾಧಿಪತಿ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರಿಗೆ ನಗರದಲ್ಲಿ ಭವ್ಯ ಶೋಭಾ ಯಾತ್ರೆ ಮಾಡಿ, ಗೌರವಿಸಲಾಯಿತು.

ಅಖಿಲ ಭಾರತ ಮಧ್ವ ಮಹಾಮಂಡಳದ ವತಿಯಿಂದ ನಗರದ ಕೋರ್ಟ್‌ ಸರ್ಕಲ್‌ನಿಂದ ಕೃಷ್ಣ ವಾದಿರಾಜ ಮಠದ ವರೆಗೆ ಶೋಭಾ ಯಾತ್ರೆ ನಡೆಯಿತು. ಸಾಂಸ್ಕೃತಿಕ ಕಲಾತಂಡಗಳು ಶೋಭಾ ಯಾತ್ರೆಗೆ ಮೆರಗು ನೀಡಿದವು. ರಸ್ತೆಯ ಇಕ್ಕೆಲಗಳಲ್ಲಿ ಭಕ್ತರು ನಿಂತು ಶ್ರೀಗಳ ದರ್ಶನ ಪಡೆದರು.

ಬಳಿಕ ಕೃಷ್ಣ ವಾದಿರಾಜ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀಗಳನ್ನು ಸನ್ಮಾನಿಸಲಾಯಿತು. 

ವಿದ್ಯಾರ್ಥಿ ನಿಲಯ ನಿರ್ಮಾಣ:

ಜಿಲ್ಲೆಯ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಐದು ದಶಕದ ಹಿಂದೆ ನಿರ್ಮಾಣವಾಗಿರುವ ವಸತಿ ನಿಲಯ ಶಿಥಿಲವಾಗಿದ್ದು, ಇದೀಗ ಅದೇ ಜಾಗದಲ್ಲಿ ₹ 4 ಕೋಟಿ ವೆಚ್ಚದಲ್ಲಿ ಹೊಸ ವಿದ್ಯಾರ್ಥಿ ನಿಲಯ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಶ್ರೀಗಳು ತಿಳಿಸಿದರು.

ನೂತನ ವಿದ್ಯಾರ್ಥಿ ನಿಲಯವು ಆಧುನಿಕ ಸೌಲಭ್ಯಗಳ ಜೊತೆಗೆ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಕೇಂದ್ರವನ್ನಾಗಿ ನಿರ್ಮಿಸಲು ಯೋಜಿಸಲಾಗಿದೆ ಎಂದರು.

ಹೊಸ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ ಭಕ್ತರು, ದಾನಿಗಳು ಉದಾರವಾಗಿ ಆರ್ಥಿಕ ಸಹಾಯ ಮಾಡುವಂತೆ ಶ್ರೀಗಳು ಮನವಿ ಮಾಡಿದರು.

ಸಮಾಜದ ಪ್ರಮುಖರಾದ ಗೋಪಾಲ ನಾಯಕ, ಪ್ರಕಾಶ ಅಕ್ಕಲಕೋಟ, ಶ್ರೀಪಾದ ಸಿಂಗಮಲ್ಲೆ, ಅಶೋಕ ರಾವ, ವಿಜಯ ಜೋಶಿ, ವಿಕಾಸ ಪದಕಿ, ರಾಕೇಶ್ ಕುಲಕರ್ಣಿ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT