ಸಿಂದಗಿ: ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ನೋಂದಣಿಗಾಗಿ ಪಟ್ಟಣದಲ್ಲಿ ನಾಲ್ಕು ಸೇವಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಪುರಸಭೆ ಕಾರ್ಯಾಲಯ, ಪುರಸಭೆ ವಾಣಿಜ್ಯ ಸಂಕೀರ್ಣ, ಅಂಬೇಡ್ಕರ್ ಭವನದ ಎದುರಿನ ತಾಲ್ಲೂಕು ಪಂಚಾಯಿತಿ ಕಟ್ಟಡ ಹಾಗೂ ಕಾಳಿಕಾ ನಗರದ ಅನುಗ್ರಹ ಕಲ್ಯಾಣ ಮಂಟಪದ ಬಳಿ ಹೀಗೆ 4 ನೋಂದಣಿ ಸೇವಾ ಕೇಂದ್ರಗಳು ಗುರುವಾರ ಕಾರ್ಯಾರಂಭ ಮಾಡಿವೆ.
ಆದರೆ ಸರ್ವರ್ ಸಮಸ್ಯೆಯಿಂದಾಗಿ ನೋಂದಣಿ ಕಾರ್ಯ ಪುರಸಭೆ ಆವರಣದಲ್ಲಿನ ಎರಡು ಕೇಂದ್ರಗಳಲ್ಲಿ ನಡೆದಿಲ್ಲ ಎಂದು ಪುರಸಭೆ ಆರೋಗ್ಯ ನಿರೀಕ್ಷಕ ಎನ್.ಎಂ. ಉಸ್ತಾದ ಪ್ರತಿಕ್ರಿಯಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ತಾಲ್ಲೂಕು ಶಿಶು ಅಭಿವೃದ್ದಿ ಯೋಜನಾಧಿಕಾರಿ ಬಸವರಾಜ ಜಿಗಳೂರ ಇಲ್ಲಿಯ ಸೇವಾ ಕೇಂದ್ರಗಳಿಗೆ ಭೇಟಿ ಪರಿಶೀಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.