ಇಂಡಿ: ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದು 11 ವರ್ಷಗಳಾಯಿತು. ಚುನಾವಣೆಗೂ ಮುಂಚೆ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆಯೇ ? ಬಡಜನರಿಗೆ ಅಚ್ಚೆ ದಿನಗಳು ಬಂದಿವೆಯೇ ? ಎಂಬುದನ್ನು ರಾಜ್ಯ ಬಿಜೆಪಿ ನಾಯಕರು ಮೊದಲು ಆತ್ಮಾವಲೋಕನ ಮಾಡಿಕೊಂಡು ನಂತರ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಬೇಕು ಎಂದು ಇಂಡಿ ತಾಲ್ಲೂಕು ಗ್ಯಾರಂಟಿ ಯೋಜನೆಯ ಸಮಿತಿ ಅಧ್ಯಕ್ಷ ಪ್ರಶಾಂತ ಕಾಳೆ ಸಲಹೆ ನೀಡಿದ್ದಾರೆ.

ಅವರು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ನಾಯಕರು ಪದೇ ಪದೇ ರಾಜ್ಯ ಸರ್ಕಾರವನ್ನು ಟೀಕಿಸುತ್ತಿರುವದರ ಬಗ್ಗೆ ಪ್ರಸ್ತಾಪಿಸಿ ಈ ಸಲಹೆ ನೀಡಿದ್ದಾರೆ.

ಬಿಜೆಪಿ ನಾಯಕರು ರಾಜ್ಯ ಕಾಂಗ್ರೆಸ್ ಸರ್ಕಾರದ ಯೋಜನೆಗಳ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಳೆದುಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಬಡವರ ಪಕ್ಷ, ದಲಿತರು, ಕೂಲಿ ಕಾರ್ಮಿಕರು, ರೈತರು ಮಹಿಳೆಯರ ಪರವಾಗಿರುವ ಅಭಿವೃದ್ಧಿ ಪರ ಯೋಜನೆಗಳನ್ನು ಜನ ಸಾಮಾನ್ಯರಿಗೆ ನೀಡುವ ಸರ್ಕಾರವಾಗಿದೆ ಎಂದರು.

ಕೇಂದ್ರದ ಬಿಜೆಪಿ ಸರ್ಕಾರ ಉದ್ಯಮಿಗಳ ಕೋಟ್ಯಾಂತರ ರೂಪಾಯಿ ಸಾಲವನ್ನು ಮನ್ನಾ ಮಾಡಿದೆ. ಬಿಜೆಪಿ ಶ್ರೀಮಂತರ ಪರವಾದ ಸರ್ಕಾರವಾಗಿದೆ ಎಂದು ಆರೋಪಿಸಿದರು.

ಮೋದಿ ಅವರು ಪ್ರಧಾನಿಯಾದ ಮೇಲೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಈ ತಪ್ಪನ್ನು ಮುಚ್ಚಿಕೊಳ್ಳಲು ಬಿಜೆಪಿ ನಾಯಕರು ರಾಜ್ಯ ಸರ್ಕಾರದ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡುವುದನ್ನು ರೂಢಿಸಿಕೊಂಡಿದ್ದಾರೆ ಎಂದರು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಬೆಲೆ ಕಡಿಮೆಯಾದರೂ ಕೂಡಾ ಕೇಂದ್ರ ಸರ್ಕಾರ ಪೆಟ್ರೋಲ್, ಡಿಸೈಲ್, ಎಲ್ಪಿಜಿ ಗ್ಯಾಸ್ ದರ ಇಳಿಸಿಲ್ಲ. ಬೆಲೆ ಏರಿಕೆಗೆ ಮೋದಿ ನೇತೃತ್ವದ ಸರ್ಕಾರವೇ ಕಾರಣ ಎಂದರು. ಜನಸಾಮಾನ್ಯರಿಗೆ ಅಗತ್ಯವಿರುವ ದಿನ ವಸ್ತುಗಳ ಬೆಲೆ ಏರಿಕೆಯಾಗುತ್ತಿವೆ. ಮತ್ತೊಂದೆಡೆ ಆದಾಯ ಪಾತಾಳಕ್ಕೆ ಕುಸಿಯುತ್ತಿದೆ. ಇಂತಹ ಸ್ಥಿತಿಯಲ್ಲಿ ಬಡವರಿಗೆ ಆರ್ಥಿಕ ಶಕ್ತಿ ತುಂಬಲು ರಾಜ್ಯದಲ್ಲಿಯ ಕಾಂಗ್ರೆಸ್ ಸರ್ಕಾರ ಪ್ರಮುಖವಾದ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.