ವಿಜಯಪುರ: ‘ಸರ್ಕಾರಿ ಅಧಿಕಾರಿಗಳು ಹಾಗೂ ಅವರ ಕುಟುಂಬದ ಸದಸ್ಯರಿಗೆ ಸಾಂಸ್ಕೃತಿಕ ಹಾಗೂ ಮನರಂಜನಾ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ನಿರ್ಮಿತಿ ಬಜಾರ್ನಲ್ಲಿ ಆಫೀಸರ್ಸ್ ಜಿಮ್ಖಾನಾ ಕ್ಲಬ್ ಆರಂಭಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದರು.

ನಿರ್ಮಿತಿ ಬಜಾರ್ನಲ್ಲಿ ಬುಧವಾರ ನಡೆದ ಜಿಮ್ಖಾನಾ ಕ್ಲಬ್ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.

‘ಇಲ್ಲಿಯ ಜಿಮ್ಖಾನಾ ಕ್ಲಬ್ ಕೂಡ ಐತಿಹಾಸಿಕ ಹಿನ್ನೆಲೆ ಹೊಂದಿದೆ. ಅಧಿಕಾರಿಗಳು ಹಾಗೂ ಅವರ ಕುಟುಂಬಗಳ ಸದಸ್ಯರ ಒತ್ತಡ ನಿವಾರಣೆ, ವಿವಿಧ ಮನರಂಜನಾ ಚಟುವಟಿಕೆಗಳಿಗೆ ಸೌಕರ್ಯಗಳನ್ನು ಕಲ್ಪಿಸುವ ಮೂಲಕ ಅವರಿಗೆ ವಿಶೇಷ ಸಮಯಾವಕಾಶ ಈ ಕ್ಲಬ್ನಲ್ಲಿ ದೊರೆಯುವಂತಾಗಲು ಅವಶ್ಯಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದು ಹೇಳಿದರು.

‘ಕ್ಲಬ್ನ 2019–20ನೇ ಸಾಲಿನ ತಾತ್ಕಾಲಿಕ ಕಾರ್ಯಕಾರಿ ಮಂಡಳಿ ರಚಿಸಲಾಗಿದ್ದು, ಜಿಲ್ಲಾಧಿಕಾರಿ ಶಾಶ್ವತ ಅಧ್ಯಕ್ಷರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಾಶ್ವತ ಉಪಾಧ್ಯಕ್ಷರಾಗಿರುತ್ತಾರೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಹ- ಅಧ್ಯಕ್ಷರಿರುತ್ತಾರೆ. ಒಂಬತ್ತು ಜನ ತಾತ್ಕಾಲಿಕ ಕಾರ್ಯಕಾರಿ ಮಂಡಳಿ ಸದಸ್ಯರನ್ನು ನೇಮಕ ಮಾಡಲಾಗಿದೆ’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿಕಾಸ್ ಕಿಶೋರ್ ಸುರಳಕರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಪ್ರಸನ್ನ ಮಾತನಾಡಿದರು.
ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ನೇಮಗೌಡ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಅಮರೇಶ ನಾಯಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.