ಗುರುವಾರ , ನವೆಂಬರ್ 26, 2020
20 °C

ವಿಜಯಪುರ: ಮಳೆಯ ಅಬ್ಬರ, ಸಿಡಿಲು ಬಡಿದು ರೈತ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಜಿಲ್ಲೆಯಲ್ಲಿ ಮಂಗಳವಾರ ಮತ್ತೆ ಮಳೆಯ ಅಬ್ಬರ ಜೋರಾಗಿದ್ದು, ಚಡಚಣ ತಾಲ್ಲೂಕಿನ ಹತ್ತಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ರೈತರೊಬ್ಬರು ಸಾವಿಗೀಡಾಗಿದ್ದಾರೆ.

ಹತ್ತಳ್ಳಿ ಗ್ರಾಮದ ಧರೆಪ್ಪ ಧರ್ಮಪ್ಪ ಬಿರಾದಾರ (45) ಜಾನುವಾರುಗಳಿಗೆ ಮೇವು ತರಲು ಎತ್ತಿನ ಚಕ್ಕಡಿಯಲ್ಲಿ ತೆರಳುತ್ತಿದ್ದಾಗ ಸಿಡಿಲು ಬಡಿದಿದೆ. ರೈತ ಸಾವಿಗೀಡಾದರೂ ಚಕ್ಕಡಿ ಎಳೆಯುತ್ತಿದ್ದ ಜೋಡೆತ್ತಿಗೆ ಯಾವುದೇ ಅಪಾಯವಾಗಿಲ್ಲ. 

ಜಿಲ್ಲೆಯ ಸಿಂದಗಿ, ದೇವರಹಿಪ್ಪರಗಿ, ಮುದ್ದೇಬಿಹಾಳ, ಕೊಲ್ಹಾರ, ಬಸವನ ಬಾಗೇವಾಡಿ, ನಾಲತವಾಡದಲ್ಲಿ ಮಳೆಯಾಗಿದೆ.

ಭೀಮಾ ನದಿ ತೀರದ ಪ್ರವಾಹ ತಗ್ಗಿದೆ. ಆದರೆ, ಸಂಕಷ್ಟಕ್ಕೆ ಒಳಗಾಗಿರುವ ಜನರು ಇನ್ನೂ ಕಾಳಜಿ ಕೇಂದ್ರದಲ್ಲೇ ಉಳಿದುಕೊಂಡಿದ್ದಾರೆ. ರಕ್ಷಣಾ ಮತ್ತು ಪುನರ್ವಸತಿ ಕಾರ್ಯಾಚರಣೆ ನಡೆದಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.