ವಿಜಯಪುರ: ಡಿಸೆಂಬರ್ 7 ರಂದು ನಗರದಲ್ಲಿ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2025 ಸೂಸೂತ್ರವಾಗಿ ನಡೆಸಬೇಕು ಮತ್ತು ಅದೇ ದಿನ ನಡೆಯಲಿರುವ ಶಿಕ್ಷಕರ ಟಿಇಟಿ ಪರೀಕ್ಷೆಯಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಸಕಲ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಧಿಕಾರಿಗಳು ಮತ್ತು ವೃಕ್ಷಥಾನ್ ಹೇರಿಟೆಜ್ ರನ್ ಕೋರ್ ಕಮಿಟಿ ಸದಸ್ಯರೊಂದಿಗೆ ಮಂಗಳವಾರ ಸಭೆ ನಡೆಸಿ ಮಾತನಾಡಿದರು.

ಪೂರ್ವಭಾವಿ ಕಾರ್ಯಕ್ರಮಗಳು ನಡೆಯುವ ಎರಡು ದಿನಗಳಂದು ಪೊಲೀಸರು ಭದ್ರತೆ ಒದಗಿಸಬೇಕು. ಯಾವುದೇ ರೀತಿಯಲ್ಲಿ ಗೊಂದಲ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಭಾನುವಾರ ಹೆರಿಟೇಜ್ ರನ್ ನಡೆಯಲಿದ್ದು, ಶನಿವಾರದಿಂದಲೇ ವಾಹನ ಸಂಚಾರಗಳ ಮಾರ್ಗ ಬದಲಾವಣೆ, ಝೀರೋ ಟ್ರಾಫಿಕ್ ಕುರಿತು ಸಭೆ ನಡೆಸಿ ಪರ್ಯಾಯ ಮಾರ್ಗಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಸಂಚಾರಿ ಪೊಲೀಸರ ಜೊತೆಯಲ್ಲಿಯೇ ಸಿವಿಲ್ ಪೊಲೀಸರೂ ಕೂಡ ಕಟ್ಟೆಚ್ಚರ ವಹಿಸಬೇಕು ಎಂದರು.

20 ಸಾವಿರಕ್ಕೂ ಹೆಚ್ಚು ಓಟಗಾರರು ಮತ್ತು ಸಾರ್ವಜನಿಕರು ಸೇರುವುದರಿಂದ ಜನದಟ್ಟಣೆ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಬೆಳಿಗ್ಗೆ 6 ಗಂಟೆಯಿಂದಲೇ ನಾನಾ ವಿಭಾಗಗಳ ಓಟಗಳು ಪ್ರಾರಂಭವಾಗಲಿವೆ. 21 ಕಿ. ಮೀ, 10 ಕಿ. ಮೀ ಹಾಗೂ 5 ಕಿ. ಮೀ ಓಟದಲ್ಲಿ ಪಾಲ್ಗೋಳ್ಳುವ ಕ್ರೀಡಾಪಟುಗಳು ಓಡುವ ಮಾರ್ಗ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಬೇಕು. ಆ್ಯಂಬುಲನ್ಸ್ ಸೇರಿದಂತೆ ಅತೀ ತುರ್ತು ಸಂದರ್ಭದಲ್ಲಿ ಯಾವುದೇ ರೀತಿಯಲ್ಲಿ ತೊಡಕು ಆಗದಂತೆ ಈಗಲೇ ಎಸ್ಓಪಿ (ಸ್ಚಾಂಡರ್ಡ್ ಆಪರೇಶನ್ ಪ್ರೊಸೀಜರ್) ಪ್ರಕಾರ ಎಲ್ಲ ಮುಂಜಾಗೃತೆ ವಹಿಸಬೇಕು ಎಂದು ಹೇಳಿದರು.

ಇಟಿ ಪರೀಕ್ಷಾರ್ಥಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಅಗತ್ಯವಿರುವ ಕಡೆ ಪೊಲೀಸ್ ವಾಹನಗಳಲ್ಲಿ ಅವರನ್ನು ಪರೀಕ್ಷೆ ಕೇಂದ್ರಗಳಿಗೆ ತಲುಪಿಸಬೇಕು. ವಾಹನಗಳ ಪಾರ್ಕಿಂಗ್ ಸ್ಥಳಗಳನ್ನು ಗುರುತಿಸಿ ನಾಲ್ಕೈದು ದಿನಗಳಲ್ಲಿ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.

ಹೆಚ್ಚುವರಿ ಎಸ್ಪಿ ರಾಮನಗೌಡ ಹಟ್ಟಿ, ಡಿವೈಎಸ್ಪಿ ಬಸವರಾಜ ಯಲಿಗಾರ, ವಿಜಯಪುರ ಸೈಕ್ಲಿಂಗ್ ಗ್ರುಪ್ ಅಧ್ಯಕ್ಷ ಡಾ. ಮಹಾಂತೇಶ ಬಿರಾದಾರ, ವೃಕ್ಷಥಾನ್ ಹೆರಿಟೇಜ್ ಕೋರ್ ಕಮಿಟಿಯ ಸಂಚಾಲಕ ಮುರುಗೇಶ ಪಟ್ಟಣಶೆಟ್ಟಿ, ಪದಾಧಿಕಾರಿಗಳಾದ ವಿನಯ ಕಂಚ್ಯಾಣಿ, ಸೋಮಶೇಖರ ಸ್ವಾಮಿ, ಶಿವನಗೌಡ ಪಾಟೀಲ, ಸಂತೋಷ ಔರಸಂಗ, ಸಂದೀಪ ಮಡಗೊಂಡ, ಪೊಲೀಸ್ ಇಲಾಖೆ ಮತ್ತು ಮಹಾನಗರ ಪಾಲಿಕೆಯ ನಾನಾ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.