ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೌಢಶಾಲಾ ಶಿಕ್ಷಕರ ಬೇಡಿಕೆ: ಹುಕ್ಕೇರಿಗೆ ಮನವಿ

Last Updated 23 ಜನವರಿ 2023, 12:20 IST
ಅಕ್ಷರ ಗಾತ್ರ

ವಿಜಯಪುರ: ಪ್ರೌಢಶಾಲಾ ಶಿಕ್ಷಕರಿಗೆ ಪದವಿ ಪೂರ್ವ ಉಪನ್ಯಾಸಕ ಹುದ್ದೆಗೆ ಬಡ್ತಿ ನೀಡುವುದು, ಜಿಲ್ಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಆರಂಭಕ್ಕೆ ಅನುದಾನ ಒದಗಿಸುವುದು ಸೇರಿದಂತೆ ಪ್ರೌಢಶಾಲಾ ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳ ಈಡೇರಿಕೆಗೆ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸುವಂತೆ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ್ ಬಿರಾದಾರ ಹಾಗೂ ಸಂಘದ ಪದಾಧಿಕಾರಿಗಳು ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಅವರನ್ನು ಸೋಮವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು.

2008ರ ನಂತರ ನೇಮಕವಾದ ಪ್ರೌಢಶಾಲಾ ಶಿಕ್ಷಕರಿಗೆ ಒಂದು ವೇತನ ಬಡ್ತಿ ನೀಡುವುದು, ವಿಜಯಪುರ ಜಿಲ್ಲೆಯ ಹೊಸ ತಾಲ್ಲೂಕುಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಪ್ರಾರಂಭಿಸುವುದು, ಶೀಘ್ರದಲ್ಲಿ ಟಿಜಿಟಿ ಶಿಕ್ಷಕರರನ್ನು ಪ್ರೌಢಶಾಲೆಗಳಿಗೆ ಮರುಹೊಂದಾಣಿಕೆ ಮಾಡಿ ಪ್ರೌಢಶಾಲಾ ಶಿಕ್ಷಕರ ನೇಮಕ ಮಾಡಬೇಕು ಎಂದು ಶಿವರಾಜ್ ಬಿರಾದಾರ ಒತ್ತಾಯಿಸಿದರು.

ಯಾವುದೇ ಕಚೇರಿಯಲ್ಲಿ ಪ್ರೌಢಶಾಲಾ ಶಿಕ್ಷಕರ ಕಡತಗಳು ವಿಳಂಬ ಮಾಡದಂತೆ ಕ್ರಮವಹಿಸಬೇಕು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಸಮಯದಲ್ಲಿ ಯಾರೋ ಮಾಡಿದ ತಪ್ಪಿಗಾಗಿ ಪ್ರೌಢಶಾಲಾ ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರಿಗೆ ತೊಂದರೆಯಾಗುತ್ತಿದ್ದು ಅದನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದರು.

ಶಿಕ್ಷಕರಿಗೆ ತೊಂದರೆಯಾಗದ ರೀತಿಯಲ್ಲಿ ಪ್ರಸ್ತುತ ಇರುವ ಸಂಖ್ಯೆಯ ಆಧಾರದ ಮೇಲೆ ಹೆಚ್ಚುವರಿ ಪ್ರಕ್ರಿಯೆಯನ್ನು ನಡೆಸಬೇಕು, ಎಸ್ ಎಸ್ ಎಲ್ ಸಿ ಪರೀಕ್ಷೆಯ ಮೌಲ್ಯಮಾಪನ ಮಾಡುವ ಸಂದರ್ಭದಲ್ಲಿ ವಿನಾಕಾರಣ ಶಿಕ್ಷಕರಿಗೆ ದಂಡ ವಿಧಿಸಲಾಗುತ್ತಿದೆ, ಇದನ್ನು ತಡೆಗಟ್ಟಲು ಪಾರದರ್ಶಕ ವ್ಯವಸ್ಥೆ ರೂಪಿಸಬೇಕು ಹಾಗೂ ಪ್ರೌಢಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಆರಂಭಿಸಬೇಕು ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿ ಪ್ರಕಾಶ ಹುಕ್ಕೇರಿ, ನಾನು ಶಿಕ್ಷಕರ ಧ್ವನಿಯಾಗಿ ಕೆಲಸ ಮಾಡುವೆ, ಪ್ರೌಢಶಾಲಾ ಶಿಕ್ಷಕರ ಸಮಸ್ಯೆಗಳಿಗೆ ನಾನು ಅಧಿವೇಶನದಲ್ಲಿ ಧ್ವನಿ ಎತ್ತಲು ಪ್ರಾಮಾಣಿಕವಾದ ಕಾರ್ಯ ಮಾಡುವೆ ಎಂದರು.

ಸುಮಾರು 20 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ಗಳನ್ನು ಮತ್ತು ಅವಶ್ಯಕತೆ ಇರುವ ಶಾಲೆಗಳಿಗೆ ಕೊಠಡಿ ವ್ಯವಸ್ಥೆ ಮಾಡಿಕೊಡುವುದಾಗಿ ಭರವಸೆ ನೀಡಿದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಗಲಿ, ಪ್ರಾಚಾರ್ಯ ಗಂಗನಹಳ್ಳಿ, ಮುಖಂಡ ಸಂಗಮೇಶ ಬಬಲೇಶ್ವರ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುರೇಶ್ ಶೇಡಶಾಳ, ಜುಬೇರ ಕೆರೂರ, ವಿಜಯಕುಮಾರ ಹತ್ತಿ, ಉಪಾಧ್ಯಕ್ಷ ಶ್ರೀಪಾದ ಜೋಶಿ, ಕೋಶಾಧ್ಯಕ್ಷ ಸಿದ್ದು ಹಂಚಿನಾಳ, ಪ್ರಕಾಶ ಗೊಂಗಡಿ, ವಿಜಯಪುರ ನಗರ ಅಧ್ಯಕ್ಷ ಅರಳಿಮಟ್ಟಿ, ಬಬಲೇಶ್ವರ ತಾಲೂಕು ಘಟಕದ ಅಧ್ಯಕ್ಷ ಸಂದೀಪ ದೇಶಪಾಂಡೆ, ವಿಶ್ವನಾಥ ಗಣಾಚಾರಿ ಶರಣಗೌಡ ಕರ್ನಾಳ್, ಮಹಾಂತೇಶ ಅಂಗಡಿ, ಪ್ರಕಾಶ ನಾಲತವಾಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT