ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಎಸ್‌ಎಸ್‌ಎಲ್‌ಸಿ ಮರು ಮೌಲ್ಯಮಾಪನ: ಹೆಚ್ಚಿದ ಅಂಕ ಭೂಮಿಕಾ ರಾಜ್ಯಕ್ಕೇ ದ್ವಿತೀಯ

ಮರು ಮೌಲ್ಯಮಾಪನದಲ್ಲಿ ಮೌಲ್ಯಮಾಪಕರ ಎಡವಟ್ಟು ಬಹಿರಂಗ
Published 6 ಜೂನ್ 2024, 23:55 IST
Last Updated 6 ಜೂನ್ 2024, 23:55 IST
ಅಕ್ಷರ ಗಾತ್ರ

ಮುದ್ದೇಬಿಹಾಳ: ಎಸ್‌ಎಸ್‌ಎಲ್‌ಸಿ ಉತ್ತರಪತ್ರಿಕೆಗಳ ಮರು ಮೌಲ್ಯಮಾಪನದಲ್ಲಿ ನಾಲ್ಕು ಅಂಕ ಹೆಚ್ಚು ಬಂದಿದ್ದು, ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಇಂಗ್ಲಿಷ್‌ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ಭೂಮಿಕಾ ಮಹಾದೇವ ಜುಮನಾಳ ರಾಜ್ಯಕ್ಕೆ 2ನೇ ಸ್ಥಾನ ಪಡೆದಿದ್ದಾರೆ.

ಫಲಿತಾಂಶ ಪ್ರಕಟವಾದಾಗ ಭೂಮಿಕಾ 625ಕ್ಕೆ 620 ಅಂಕ ಪಡೆದಿದ್ದರು. ಹೆಚ್ಚಿನ ಅಂಕ ನಿರೀಕ್ಷಿಸಿದ್ದ ಕಾರಣ ಮೂರು ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು. ಇಂಗ್ಲಿಷ್‌ನಲ್ಲಿ 98ರ ಬದಲು 100, ಹಿಂದಿಯಲ್ಲಿ 98ರ ಬದಲು 100 ಅಂಕ ಬಂದಿವೆ. ಒಟ್ಟು 625ಕ್ಕೆ 624 ಅಂಕ ಗಳಿಸಿದ್ದು ರಾಜ್ಯಕ್ಕೆ ಎರಡನೇ ರ‍್ಯಾಂಕ್, ಜಿಲ್ಲೆಗೆ ಮೊದಲ ಸ್ಥಾನ ಪಡೆದಿದ್ದಾಳೆ ಎಂದು ಬಿಇಒ ಬಿ.ಎಸ್. ಸಾವಳಗಿ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT