ಗುರುವಾರ , ಅಕ್ಟೋಬರ್ 29, 2020
26 °C

ವಿಜಯಪುರ: ಸುಗ್ರೀವಾಜ್ಞೆ ಹೊರಡಿಸಿರುವುದನ್ನು ವಿರೋಧಿಸಿ ಹೆದ್ದಾರಿ ತಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೊರಡಿಸಿರುವ ಸುಗ್ರೀವಾಜ್ಞೆಗಳು ಮತ್ತು ರೂಪಿಸಿರುವ ಮಸೂದೆಗಳು ರೈತರು ಮತ್ತು ಕಾರ್ಮಿಕರ ವಿರೋಧಿಯಾಗಿವೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ರೈತರು ಇಲ್ಲಿನ ಸಿಂದಗಿ ಬೈಪಾಸ್ ಬಳಿ ವಿಜಯಪುರ-ಕಲಬುರ್ಗಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.

ರೈತ ಮುಖಂಡ ಶಕ್ತಿಕುಮಾರ ಉಕಮನಾಳ ನೇತೃತ್ವದಲ್ಲಿ ರೈತರು ಹೆದ್ದಾರಿ ತಡೆ ನಡೆಸಿದ ರೈತರು, ಹಲಗೆ ಬಾರಿಸುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಭೂ ಸುಧಾರಣಾ ತಿದ್ದುಪಡೆ ಕಾಯ್ದೆ, ಎ.ಪಿ.ಎಂ.ಸಿ. ತಿದ್ದುಪಡಿ ಕಾಯ್ದೆ ಜಾರಿಗೆ ತಂದಿರುವುದನ್ನು ವಿರೋಧಿಸಿದರು. ಜೊತೆಗೆ ಸಾರ್ವಜನಿಕ ವಲಯಗಳನ್ನು ಖಾಸಗೀಕರಣಗೊಳಿಸುತ್ತಿರುವುದನ್ನು ಖಂಡಿಸಿದರು.

ರೈತ, ಕಾರ್ಮಿಕ ವಿರೋಧಿ ಮಸೂದೆಗಳನ್ನು ಸರ್ಕಾರಗಳು ತಕ್ಷಣ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ವಿಧೇಯಕಗಳು ರೈತರು ಮತ್ತು ವಾಣಿಜ್ಯೋದ್ಯಮಿಗಳಿಗೆ ಮಾರಕವಾಗಿದೆ. ಬಹುರಾಷ್ಟ್ರೀಯ ಕಂಪನಿಗಳಿಗೆ, ಕಾರ್ಪೊರೇಟ್‌ ಕಂಪನಿಗಳಿಗೆ ಉತ್ತೇಜನಕಾರಿಯಾಗಿದೆ. ಈ ಕಂಪನಿಗಳ ಹಿಡಿತಕ್ಕೆ ರೈತಾಪಿ ಜನರು ಒಳಗಾಗುತ್ತಾರೆ ಎಂದು ಆರೋಪಿಸಿದರು. 

ಪ್ರಜಾತಾಂತ್ರಿಕ ಚರ್ಚೆಗಳಿಗೆ ಕಿಂಚಿತ್ತೂ ಬೆಲೆ ನೀಡದೆ, ಎಲ್ಲ ಪ್ರಜಾತಾಂತ್ರಿಕ ಪ್ರಕ್ರಿಯೆಗಳನ್ನು ಗಾಳಿಗೆ ತೂರಿ ಕೋವಿಡ್ ಸಂದರ್ಭವನ್ನು ಬಳಸಿಕೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತರಾತುರಿಯಲ್ಲಿ ಈ ಕಾಯ್ದೆಗಳನ್ನು ಅಂಗೀಕರಿಸುತ್ತಿರುವ ಕುತಂತ್ರವು ಬಯಲಾಗಿದೆ ಎಂದು ದೂರಿದರು.

‘ಕರ್ನಾಟಕ ಬಂದ್‌’ಗೆ ಬೆಂಬಲ

ವಿಜಯಪುರ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಅಂಗೀಕರಿಸಿರುವ ಎಪಿಎಂಸಿ ಕಾಯ್ದೆ ತಿದ್ದುಪಡಿ, ಅಗತ್ಯ ವಸ್ತುಗಳ ಕಾಯ್ದೆ ತಿದ್ದುಪಡಿ, ಗುತ್ತಿಗೆ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಅಖಿಲ ಭಾರತ ಸಂಘರ್ಷ ಸಮನ್ವಯ ಸಮಿತಿ(ಎಐಕೆಎಸ್‍ಸಿಸಿ)ಯು ಸೆ.28ರಂದು ನಡೆಸಲು ಉದ್ದೇಶಿಸಿರುವ ಕರ್ನಾಟಕ ಬಂದ್‌ಗೆ ಎಐಡಿಎಸ್‍ಒ ವಿದ್ಯಾರ್ಥಿ ಸಂಘಟನೆ, ವಿಜಯಪುರ ಮರ್ಚಂಟ್ಸ್‌ ಅಸೋಸಿಯೇಶನ್‍ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು