ಶುಕ್ರವಾರ, ಜುಲೈ 1, 2022
27 °C

ಹೋಳಿ: ಮದ್ಯ ಮಾರಾಟ ನಿಷೇಧ ಇಂದಿನಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಜಿಲ್ಲೆಯಾದ್ಯಂತ ಹೋಳಿ ಹಬ್ಬ ಆಚರಣೆ ಹಿನ್ನೆಲೆ ಮಾ.17 ರಂದು ಬೆಳಿಗ್ಗೆ 6ರಿಂದ  ಮಾ. 19ರ ರ ಮಧ್ಯರಾತ್ರಿ 12ರ ವರೆಗೆ ಮತ್ತು ಮಾ.22 ರಂದು ಬೆಳಿಗ್ಗೆ 6ರಿಂದ ಮಧ್ಯರಾತ್ರಿ 12  ರ ವರೆಗೆ ಸಾರಾಯಿ, ಐ.ಎಂ.ಎಲ್ ಮತ್ತು ಎಲ್ಲ ರೀತಿಯ ಅಂಗಡಿಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್  ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಾದ್ಯಂತ ಹೋಳಿ ಹಬ್ಬವನ್ನು ಆಚರಿಸುತ್ತಿರುವ ಪ್ರಯುಕ್ತ ಮಾ. 17 ಮತ್ತು 18 ರಂದು ಕಾಮದಹನ ಹಾಗೂ ಮಾ.18 ಮತ್ತು 19 ರಂದು ಧೂಳವಾಡ(ಬಣ್ಣ) ಮತ್ತು ಮಾ.22 ರಂದು ರಂಗಪಂಚಮಿ ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ಆದೇಶ ಹೊರಡಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು