ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವನಬಾಗೇವಾಡಿ | ಗೃಹಸಾಲ ಮೇಳ: ಸದ್ಬಳಕೆಗೆ ಸಲಹೆ

Published 7 ಮಾರ್ಚ್ 2024, 14:04 IST
Last Updated 7 ಮಾರ್ಚ್ 2024, 14:04 IST
ಅಕ್ಷರ ಗಾತ್ರ

ಬಸವನಬಾಗೇವಾಡಿ: ‘ಪುರಸಭೆಯಿಂದ ಪಟ್ಟಣದ ಇಂಗಳೇಶ್ವರ ರಸ್ತೆಯಲ್ಲಿ ನಿರ್ಮಾಣ ಮಾಡಿರುವ ಜಿ ಪ್ಲಸ್-1 ಮಾದರಿ ಮನೆಗಳನ್ನು ಫಲಾನುಭವಿಗಳಿಗೆ ವಿತರಿಸುವ ಕಾರ್ಯ ಶೀಘ್ರದಲ್ಲಿ ನಡೆಯಲಿದೆ. ಫಲಾನುಭವಿಗಳಿಗೆ ವಿವಿಧ ಬ್ಯಾಂಕ್‌ಗಳು ಗೃಹಸಾಲ ಒದಗಿಸಲು ಮುಂದೆ ಬಂದಿವೆ. ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ಹೇಳಿದರು.

ಪಟ್ಟಣದ ಪುರಸಭೆ ಸಭಾಭವನದಲ್ಲಿ ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ, ಜಿಲ್ಲಾಡಳಿತ, ಪುರಸಭೆ ಸಹಯೋಗದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) ಜಿ ಪ್ಲಸ್-1 ಹಾಗೂ ರಾಜ್ಯ ಪುರಸ್ಕ್ರತ ವಸತಿ ಯೋಜನೆಗಳ ಸಮನ್ವತೆಯೊಂದಿಗೆ ವಸತಿ ಯೋಜನೆಗಳ ಅನುಷ್ಠಾನದಡಿ ಬುಧವಾರ ಹಮ್ಮಿಕೊಂಡಿದ್ದ ಫಲಾನುಭವಿಗಳಿಗೆ ಬ್ಯಾಂಕ್‌ಗಳಿಂದ ಗೃಹಸಾಲ ಮೇಳದಲ್ಲಿ  ಮಾತನಾಡಿದರು.

‘ಈಗಾಗಲೇ ಜಿ ಪ್ಲಸ್-1 ಮಾದರಿಯಲ್ಲಿ 500 ಮನೆಗಳ ನಿರ್ಮಾಣವಾಗಿವೆ. ಫಲಾನುಭವಿಗಳಿಗೆ ತಾತ್ಕಾಲಿಕ ಹಕ್ಕು ಪತ್ರ ಈಗಾಗಲೇ ವಿತರಿಸಲಾಗಿದೆ. ಮುಂಬರುವ ದಿನಗಳಲ್ಲಿ ಕಾಯಂ ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ನಡೆಯಲಿದೆ’ ಎಂದು ಹೇಳಿದರು.

‘500 ಜನರಲ್ಲಿ ಈಗಾಗಲೇ 147 ಫಲಾನುಭವಿಗಳು ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಿದ್ದು, ಇದರಲ್ಲಿ 143 ಜನ ಸಾಲ ಪಡೆದುಕೊಂಡಿದ್ದಾರೆ.  ಈಗಾಗಲೇ 350 ಮನೆಗಳು ವಾಸಕ್ಕೆ ಯೋಗ್ಯವಾಗಿವೆ. ಉಳಿದ 150 ಮನೆಗಳನ್ನು ಕೆಲ ದಿನಗಳಲ್ಲಿ ವಾಸಕ್ಕೆ ಯೋಗ್ಯವಾಗುವಂತೆ ಮಾಡಲಾಗುವುದು.ನೀರು, ವಿದ್ಯುತ್ ಸೌಲಭ್ಯಕ್ಕಾಗಿ ಟೆಂಡರ್ ಮಾಡಲಾಗುವುದು’ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ವಸತಿ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಅಮರನಾಥ ಪುಠಾಣಿ, ವಸತಿ ಯೋಜನೆಯ ಸಹಾಯಕ ಸಂಘಟಕ ಬಸವರಾಜ ಗೋಲಾಯಿ, ವಿಷಯ ನಿರ್ವಾಹಕ ಶಿವಕುಮಾರ, ಪುರಸಭೆ ವ್ಯವಸ್ಥಾಪಕ ವಿರೇಶ ಹಟ್ಟಿ, ವಿಷಯ ನಿರ್ವಾಹಕ ರಾಜು ರಾಠೋಡ, ವಿವಿಧ ಬ್ಯಾಂಕಿನ ಸಿಬ್ಬಂದಿ, ಪುರಸಭೆ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT