ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಬಾಕಿ ವೇತನ ನೀಡಲು ಹಾಸ್ಟೇಲ್ ನೌಕರರ ಆಗ್ರಹ

Last Updated 29 ಅಕ್ಟೋಬರ್ 2020, 14:41 IST
ಅಕ್ಷರ ಗಾತ್ರ

ವಿಜಯಪುರ: ಬಾಕಿ ವೇತನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ಹಾಸ್ಟೇಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಜಿಲ್ಲಾ ಸಮಿತಿಯಿಂದ ಜಿಲ್ಲಾ ಪಂಚಾಯ್ತಿ ಮುಂಭಾಗ ಗುರುವಾರ ಧರಣಿ ನಡೆಸಲಾಯಿತು.

ಧರಣಿ ಸ್ಥಳಕ್ಕೆ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸುಜಾತಾ ಕಳ್ಳಿಮನಿ, ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗೋವಿಂದ ರೆಡ್ಡಿ ಭೇಟಿ ನೀಡಿ, ಮನವಿ ಸ್ವೀಕರಿಸಿದರು.

ಹಿಂದುಳಿದ ವರ್ಗಗಳ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಬಾಕಿ ವೇತನ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.

ಗ್ರಾಮ ಪಂಚಾಯ್ತಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಭೀಮಶಿ ಕಲಾದಗಿ ಮಾತನಾಡಿ, ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ದುಡಿಯುತ್ತಿರುವ ‘ಡಿ’ ಗ್ರೂಫ್ ನೌಕರರ ವೇತನ ಬಾಕಿ ಇದೆ. ಕೆಲವೊಂದು ಇಲಾಖೆಯಲ್ಲಿ ಮಾರ್ಚ್‌ನಿಂದ ಇಲ್ಲಿಯವರೆಗೆ ಬಾಕಿ ವೇತನ ನೀಡಿರುವುದಿಲ್ಲ. ಇದರಿಂದ ನಮ್ಮ ಕುಟುಂಬದ ನಿರ್ವಹಣೆ ಮಾಡುವುದು ತೊಂದರೆಯಾಗಿದೆ ಎಂದರು.

ಪಿ.ಎಫ್‌ ಸರಿಯಾಗಿ ಜಮಾ ಆಗಿರುವುದಿಲ್ಲ. ಈ ಮೂರು ಇಲಾಖೆಗಳಲ್ಲಿಯೂ ಸಹ ವೇತನ ನೀಡುವಲ್ಲಿ ತಾರತಮ್ಯ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಹುಲಗಪ್ಪ ಚಲವಾದಿ ಮಾತನಾಡಿ,ಹೊರಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಿ ಇಲಾಖೆಗಳಿಂದ ನೇರವಾಗಿ ವೇತನ ನೀಡಬೇಕು ಎಂದು ಆಗ್ರಹಿಸಿದರು.

ಹಾಸ್ಟೇಲ್ ಹೊರ ಗುತ್ತಿಗೆ ನೌಕರರ ಸಂಬಳ ₹ 25 ಸಾವಿರಕ್ಕೆ ನಿಗದಿಪಡಿಸಬೇಕು. ಕಾರ್ಮಿಕ ವಿರೋಧಿ ತಿದ್ದುಪಡಿಗಳನ್ನು ರದ್ದುಪಡಿಸಬೇಕು. ಮುಖ್ಯಮಂತ್ರಿಗಳು ಘೋಷಣೆ ಮಾಡಿದಂತೆ ಹೊರಗುತ್ತಿಗೆ ನೌಕರರಿಗೆ ಲಾಕ್‌ಡೌನ್ ಅವಧಿಯಲ್ಲಿ ಸಂಪೂರ್ಣ ವೇತನ ನೀಡಬೇಕು ಎಂದು ಒತ್ತಾಯಿಸಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಹಂದ್ರಾಳ, ಮುಖಂಡರಾದ ರಮೇಶ ಆಸಂಗಿ, ಪ್ರದೀಪ ದಳವಾಯಿ, ರಾಜೇಶ ದೇಶಪಾಂಡೆ, ಆನಂದ ಹಾದಿಮನಿ, ಪವಾಡೆಪ್ಪ ಚಲವಾದಿ, ಕಾಶಿಂ ಆಲದಾಳ, ಲಕ್ಷ್ಮಣ ಮಸಳಿ, ಯಮನಪ್ಪ ಬಜಂತ್ರಿ, ಮಲ್ಲಿಕಾರ್ಜುನ ಚಲವಾದಿ, ಶಿವಾನಂದ ಮೇಲಿನಕೇರಿ, ದಾನಮ್ಮ ಹೂಗಾರ, ನೂರಜಾನ್‌ ಎಲಗಾರ, ಗೌರಕ್ಕ ಬೀಳೂರ, ಶಾಂತಾ ಕ್ವಾಟಿ, ಬೋರಮ್ಮ ಎಲ್.ಜಿ., ಬೇಬಿ ಹೊಸಮನಿ, ಲಕ್ಷ್ಮೀ ಮಂಗಸೂಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT