ಸೋಮವಾರ, ಜೂನ್ 14, 2021
20 °C

ನೆರವಿಗೆ ಮನೆಗೆಲಸ ಮಹಿಳೆಯರ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಮನೆಗೆಲಸ ಮಾಡುವ ಮಹಿಳೆಯರ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್‍ಎಸ್) ಪದಾಧಿಕಾರಿಗಳು ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಗುರುವಾರ ಮನವಿ ಸಲ್ಲಿಸಿದರು.

ಕೋವಿಡ್ ಲಾಕ್‌ಡೌನ್‌ ಅವಧಿಯಲ್ಲಿ ಮನೆಗೆಲಸಕ್ಕೆ ಹೋಗಲು ಸಾಧ್ಯವಾಗದೆ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದೇವೆ. ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಹುತೇಕ ಮನೆಗಳಲ್ಲಿ ಕೆಲಸಕ್ಕೆ ಬಾರದಂತೆ ತಿಳಿಸಿದ್ದಾರೆ.  ಇಂತಹ ಸಂಕಷ್ಟದ ಸಂದರ್ಭದಲ್ಲಿ ನಮಗೆ ಆಹಾರ ಧಾನ್ಯಗಳ ಕಿಟ್‍ ವಿತರಿಸಬೇಕು. ಸಹಾಯಧನ ನೀಡಬೇಕು. ರಿಯಾಯಿತಿ ದರದಲ್ಲಿ ಬಸ್‍ಪಾಸ್ ನೀಡಬೇಕು ಎಂದು ಮನವಿ ಮಾಡಿದರು.

ಎಐಎಂಎಸ್‍ಎಸ್ ಜಿಲ್ಲಾ ಸಹ ಸಂಚಾಲಕಿ ಗೀತಾ ಎಚ್., ಸದಸ್ಯರಾದ ಭಾವನಾ ಕೊಂಡುಗುಳಿ, ಸಲ್ಮಾ ಶಾರಪ್ಯಾದೆ, ರಜಿಯಾ ಶಾರಪ್ಯಾದೆ, ಅತಿಯಾ ಲೋಕಾಪುರ, ಶಾಹಿನ್ ಶೇಖ್, ಯಾಸ್ಮಿನ್ ಪಟಬೆಗಾರ, ಮಮತಾಜ್‌, ರಜಿಯಾ ಇನಾಮದಾರ, ಶಾಹಿನ್ ಮೇಟಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.