ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರಿಂದ  ಹುಬ್ಬಳ್ಳಿ-ಕಲಬುರ್ಗಿ ರಾಷ್ಟ್ರೀಯ ಹೆದ್ದಾರಿ ತಡೆ 

Last Updated 6 ಫೆಬ್ರುವರಿ 2021, 7:22 IST
ಅಕ್ಷರ ಗಾತ್ರ

ವಿಜಯಪುರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ, ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಜಿಲ್ಲೆಯ ರೈತರು ಇಲ್ಲಿನ ಸಿಂದಗಿ ಬೈಪಾಸ್ ಬಳಿ ಹುಬ್ಬಳ್ಳಿ-ಕಲಬುರ್ಗಿ ರಾಷ್ಟ್ರೀಯ ಹೆದ್ದಾರಿ 218 ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘ, ರೈತ ಕೃಷಿ ಕಾರ್ಮಿಕ ಸಂಘಟನೆ, ಪ್ರಾಂತ ರೈತ ಸಂಘಟನೆ, ಹಸಿರು ಸೇನೆ, ಎಐಡಿಎಸ್ ಒ, ಸಿಐಟಿಯು, ಎಐಕೆಕೆಎಂಎಸ್, ಎಐಯುಟಿಯುಸಿ, ಅಖಿಲ ಭಾರತ ಕಿಶಾನ್ ಸಭಾ ಮತ್ತಿತರ ಸಂಘಟನೆಗಳು ಹೆದ್ದಾರಿ ತಡೆಯಲ್ಲಿ ಭಾಗವಹಿಸಿವೆ.

ಜೈಜವಾನ್, ಜೈಕಿಸಾನ್ ಘೋಷಣೆಗಳು ಮೊಳಗುತ್ತಿವೆ. ರೈತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.

ರೈತ ಮುಖಂಡರಾದ ಭೀಮಶಿ ಕಲಾದಗಿ, ಪ್ರಕಾಶ ಹಿಟ್ನಳ್ಳಿ, ಬಿ. ಭಗವಾನ್ ರೆಡ್ಡಿ, ಶಕ್ತಿಕುಮಾರ್ ಉಕುಮನಾಳ, ಮಲ್ಲಿಕಾರ್ಜುನ ಎಚ್.ಟಿ. ಅಕ್ರಮ್ ಮಾಶಾಳಕರ, ಸಿದ್ಧಲಿಂಗ ಬಾಗೇವಾಡಿ, ಸುರೇಖಾ ಕಡಪಟ್ಟಿ, ಸುರೇಖಾ ರಜಪೂತ, ಎಚ್.ಟಿ.ಭರತ್ ಜುಮಾರ್, ಬಾಳು ಜೇವೂರ, ಚಂದ್ರೇಗೌಡ ಮತ್ತಿತರರು ರಸ್ತೆ ತಡೆಯಲ್ಲಿ ಭಾಗವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT