ಬುಧವಾರ, ಡಿಸೆಂಬರ್ 1, 2021
26 °C

ವಿಜಯಪುರ: 'ಪ್ರಜಾವಾಣಿ' ಆಯೋಜಿಸಿರುವ ಗೈಡಿಂಗ್‌ ಫೋರ್ಸ್‌’ ಕಾರ್ಯಕ್ರಮಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ‘ಪ್ರಜಾವಾಣಿ’ ಹಾಗೂ ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕಾ ಬಳಗವು ಬೆಂಗಳೂರಿನ ಇನ್‌ಸೈಟ್ಸ್‌ ಐಎಎಸ್‌ ಸಂಸ್ಥೆಯ ಸಹಯೋಗದೊಂದಿಗೆ ಐಎಎಸ್‌, ಐಪಿಎಸ್‌ ಆಕಾಂಕ್ಷಿಗಳಿಗಾಗಿ ನಗರದ ಕಂದಗಲ್‌ ಹನುಂತರಾಯ ರಂಗ ಮಂದಿರದಲ್ಲಿ ಆಯೋಜಿಸಿರುವ  ‘ಗೈಡಿಂಗ್‌ ಫೋರ್ಸ್‌’ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್‌ ಚಾಲನೆ ನೀಡಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ.ಆನಂದಕುಮಾರ್‌, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಬೆಂಗಳೂರಿನ ಇನ್‌ಸೈಟ್ಸ್‌ ಐಎಎಸ್‌ ಸಂಸ್ಥೆಯ ಸಂಸ್ಥಾಪಕ ಹಾಗೂ ನಿರ್ದೇಶಕ ವಿನಯ ಕಮಾರ್‌ ಜಿ.ಬಿ., ವಿಜಯಪುರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ,  ಪ್ರಜಾವಾಣಿ ಹುಬ್ಬಳ್ಳಿ ಬ್ಯೂರೋ ಮುಖ್ಯಸ್ಥರಾದ ರಶ್ಮಿ ಎಸ್., ಪ್ರಸರಣ ವಿಭಾಗದ ಶಿವರಾಜ ನರೋನ, ಜಾಹೀರಾತು ವಿಭಾಗದ ಸಹಾಯಕ ವ್ಯವಸ್ಥಾಪಕ ದಿವಾಕರ್ ಭಟ್, ಬೆಂಗಳೂರು ಇನ್ ಸೈಟ್ಸ್ ವ್ಯವಸ್ಥಾಪಕ ಶರತ್ ಕುಮಾರ್, ಹಿರಿಯ ಬೋಧಕ ಶಮಂತಗೌಡ ಪಾಲ್ಗೊಂಡಿದ್ದಾರೆ.

ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ ಬರೆಯಲು ಹೇಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂಬ ಬಗ್ಗೆ ವಿಷಯ ತಜ್ಞರು ಮಾರ್ಗದರ್ಶನ ನೀಡುತ್ತಿದ್ದಾರೆ.

ಐಎಎಸ್‌, ಐಪಿಎಸ್‌ ಅಧಿಕಾರಿಯಾಗಬೇಕು ಎಂದು ಕನಸು ಹೊತ್ತಿರುವ ವಿಜಯಪುರ ಜಿಲ್ಲೆಯ ವಿವಿಧ ಕಾಲೇಜುಗಳ ಸಹಸ್ರಮಾನ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು, ವಿವಿಧ ಕಾಲೇಜುಗಳ ಮುಖ್ಯಸ್ಥರು ಪಾಲ್ಗೊಂಡಿದ್ದಾರೆ.


ಕಾರ್ಯಕ್ರಮದಲ್ಲಿ ಭಾಗವಹಿಸಿರುವ ವಿದ್ಯಾರ್ಥಿಗಳು

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು