ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳ ಪ್ರತಿಭೆ ಗುರುತಿಸುವುದು ಶಿಕ್ಷಕರ ಜವಾಬ್ದಾರಿ: ಶಾಸಕ ಮನಗೂಳಿ 

Published 1 ಡಿಸೆಂಬರ್ 2023, 14:38 IST
Last Updated 1 ಡಿಸೆಂಬರ್ 2023, 14:38 IST
ಅಕ್ಷರ ಗಾತ್ರ

ಆಲಮೇಲ: ‘ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸಿ ವೇದಿಕೆ ಮೂಲಕ ಹೊರತರುವ ಜವಾಬ್ದಾರಿಯಿಂದ ಶಿಕ್ಷಕರಿಂದಾದಾಗ ಮಾತ್ರ ಪ್ರತಿಭಾ ಕಾರಂಜಿ ಕಾರ್ಯಕ್ರಮ ಯಶಸ್ವಿಯಾಗಲು ಸಾಧ್ಯ’ ಎಂದು ಶಾಸಕ ಅಶೋಕ ಮನಗೂಳಿ ಸಲಹೆ ನೀಡಿದರು.

ಪಟ್ಟಣದ ಸರ್ಕಾರಿ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಏರ್ಪಡಿಸಿದ್ದ ಆಲಮೇಲ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ನಿತ್ಯದ ಅಭ್ಯಾಸದೊಂದಿಗೆ ನಮ್ಮ ಭಾರತೀಯ ಸಂಸ್ಕೃತಿ,ಕ್ರೀಡೆಗಳ ಕಡೆಗೂ ಹೆಚ್ಚಿನ ಆಶಕ್ತಿ ಬೆಳೆಸಿಕೊಳ್ಳಬೇಕು. ಇದರಿಂದ ದೈಹಿಕ ಹಾಗೂ ಮಾನಸಿಕವಾಗಿ ವಿದ್ಯಾರ್ಥಿಗಳು ಸದೃಢರಾಗುತ್ತಾರೆ. ಅದಕ್ಕಾಗಿ ಶಿಕ್ಷಕರು ನಮ್ಮ ದೇಶದ ಸಂಸ್ಕೃತಿ, ಆಚಾರ, ವಿಚಾರಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು ಅಗತ್ಯ’ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಆರೀಪ್ ಬಿರಾದಾರ ಮಾತನಾಡಿ, ‘ವಿದ್ಯಾರ್ಥಿಗಳು ಅಭ್ಯಾಸದೊಂದಿಗೆ ಕ್ರೀಡೆಗಳ ಹವ್ಯಾಸ ಬೆಳೆಸಿಕೊಳ್ಳುವುದು ಇಂದಿನ ದಿನಮಾನದಲ್ಲಿ ಬಹಳ ಅವಶ್ಯ’ ಎಂದರು.

ಕಾರ್ಯಕ್ರಮದಲ್ಲಿ ಶ್ರೀಶೈಲಯ್ಯಾ ಅಳ್ಳೋಳ್ಳಿಮಠ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ತಹಶೀಲ್ದಾರ್‌ ಸುರೇಶ್ ಚಾವಲರ್, ಅಂಜುಮನ್ ಸಂಸ್ಥೆಯ ಉಪಾಧ್ಯಕ್ಷ ರಿಯಾಜ ಬಿಳವಾರ, ತಾಲ್ಲೂಕು ಶಿಕ್ಷಣ ಸಂಯೋಜಕ ಇಸಾಕ ಟಕ್ಕೆ, ಬಸವೇಶ್ವರ ಕನ್ನಡ ಪೂರ್ವ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಕ್ಷ ವಿಜಯಕುಮಾರ ಯಂಟಮನ, ಉಪಾಧ್ಯಕ್ಷ ಗುಂಡು ಮೇಲಿನಮನಿ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ ತೆಲ್ಲೂರ, ಶಿಕ್ಷಕರ ಸಂಘದ ಅಧ್ಯಕ್ಷ ಆನಂದ ಭೂಸನೂರ, ರವಿ ಬಿರಾದಾರ, ಶಿಕ್ಷಣ ಸಂಯೋಜಕ ನೋಡಲ್ ಅಧಿಕಾರಿ ಎಂ.ಪಿ.ಬಿಸ್ಸೆ, ಎಸ್.ಎಂ.ಪಾಟೀಲ, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಆರ್.ಎಸ್.ಬಿರಾದಾರ, ಬಿ.ಕೆ.ನಂದಿಕೋಲ, ಅಲ್ಲವುದ್ದಿನ್ ಮರ್ತೂರ ಇದ್ದರು.

15ಕ್ಕೂ ಹೆಚ್ಚಿನ ಶಾಲೆಗಳ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT