ಭಾನುವಾರ, ಸೆಪ್ಟೆಂಬರ್ 25, 2022
21 °C

ನಸೀಬು ಚನ್ನಾಗಿದ್ದರೆ ನಾಳೆಯೇ ಸಿಎಂ ಆಗಬಹುದು: ಉಮೇಶ ಕತ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ನನ್ನ ನಸೀಬು ಚನ್ನಾಗಿದ್ದರೆ ನಾಳೆಯೇ ಮುಖ್ಯಮಂತ್ರಿ ಆಗಬಹುದು ಎಂದು ಸಚಿವ ಉಮೇಶ ಕತ್ತಿ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೂ ಕೂಡ ಮುಖ್ಯಮಂತ್ರಿ ಆಕಾಂಕ್ಷಿ. ಹಾಗಂತ ಈಗಲ್ಲ. ಇನ್ನೂ 15 ವರ್ಷ ಸಮಯಾವಕಾಶ ಇದೆ. ಯಾವಾಗಲಾದರೂ ಆಗಬಹುದು ಎಂದರು.

ಈಗಾಗಲೇ ಒಂಬತ್ತು ಬಾರಿ ಶಾಸಕನಾಗಿದ್ದೇನೆ. ನನಗೆ ಮುಂದೆ ಅವಕಾಶ ಸಿಕ್ಕೇ ಸಿಗುತ್ತದೆ. ಬೊಮ್ಮಾಯಿ ತೆಗೆದು ಮುಖ್ಯಮಂತ್ರಿಯಾಗುವ ಆಶೆ ಇಲ್ಲ. ಅವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಅವರು ಮುಂದುವರಿಯುತ್ತಾರೆ. ಮುಖ್ಯಮಂತ್ರಿ ಹುದ್ದೆ ನಮ್ಮಲ್ಲಿ ಖಾಲಿ ಇಲ್ಲ ಎಂದರು.

ಬೊಮ್ಮಾಯಿ ಅವರೇ ಪೂರ್ಣಾವಧಿ ಮುಖ್ಯಮಂತ್ರಿಯಾಗಿರುತ್ತಾರೆ. ಅವರ ನಾಯಕತ್ವದಲ್ಲೇ ಚುನಾವಣೆಗೆ ಹೋಗುತ್ತೇವೆ. ಬಿಜೆಪಿಯೇ ಮರಳಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

ಕಾಂಗ್ರೆಸ್‌ನವರಿಗೆ ಮಾಡಲು ಕೆಲಸ ಇಲ್ಲ.ಮುಖ್ಯಮಂತ್ರಿ ಬದಲಾವಣೆ ಆಗುತ್ತಾರೆ ಎಂದು ವದಂತಿ ಹಬ್ಬಿಸುವುದನ್ನು ಬಿಟ್ಟು ಪಕ್ಷ ಕಟ್ಟಲು ಆದ್ಯತೆ ನೀಡಲಿ ಎಂದು ಸಲಹೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು