ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಚಗೇರಿ: ಚನ್ನಮ್ಮ ಪ್ರತಿಮೆ ಅನಾವರಣ ಏ.10ಕ್ಕೆ

Last Updated 7 ಏಪ್ರಿಲ್ 2022, 15:58 IST
ಅಕ್ಷರ ಗಾತ್ರ

ವಿಜಯಪುರ: ಕಿತ್ತೂರು ರಾಣಿ ಚನ್ನಮ್ಮ ಪ್ರತಿಮೆ ಅನಾವರಣ ಹಾಗೂ ಪಂಚಮಸಾಲಿ 2ಎ ಮೀಸಲಾತಿಗಾಗಿ ಹಕ್ಕೊತ್ತಾಯ ಕಾರ್ಯಕ್ರಮ ಏಪ್ರಿಲ್‌ 10 ರಂದು ಬೆಳಿಗ್ಗೆ 10.30ಕ್ಕೆ ಇಂಚಗೇರಿಯಲ್ಲಿ ನಡೆಯಲಿದೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಕ್ಕೊತ್ತಾಯ ಸಮಾವೇಶದಲ್ಲಿ ವಿಜಯಪುರ, ಬಾಗಲಕೋಟೆ ಅವಳಿ ಜಿಲ್ಲೆಯ ಸುಮಾರು 25 ಸಾವಿರ ಜನರು ಭಾಗವಹಿಸಲಿದ್ದಾರೆ ಎಂದರು.

ಅಶ್ವಾರೂಢ ಚನ್ನಮ್ಮ ಪ್ರತಿಮೆಯನ್ನು ₹ 8 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಪ್ರತಿಷ್ಠಾಪನೆಯಾಗುತ್ತಿರುವ ಚನ್ನಮ್ಮನ ಪ್ರಥಮ ಪ್ರತಿಮೆ ಇದಾಗಿದೆ ಎಂದು ಹೇಳಿದರು.

ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಶಿವಾನಂದ ಪಾಟೀಲ, ದೇವಾನಂದ ಚವ್ಹಾಣ, ಯಶವಂತರಾಯಗೌಡ ಪಾಟೀಲ, ಅರವಿಂದ ಬೆಲ್ಲದ, ಸಿದ್ದು ಸವದಿ, ವಿನಯ ಕುಲಕರ್ಣಿ, ರವಿಕಾಂತ ಎಸ್‌.ಪಾಟೀಲ, ಡಾ.ಸೌರ್ವಭೌಮ ಬಗಲಿ, ಅಶೋಕ ಮನಗೂಳಿ, ರಾಜುಗೌಡ ಪಾಟೀಲ, ಲಕ್ಷ್ಮಿ ಹೆಬ್ಬಾಳಕರ, ವಿಜಯಾನಂದ ಕಾಶಪ್ಪನವರ, ವೀಣಾ ಕಾಶಪ್ಪನವರ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.

ಸಮಾಜದ ಮುಖಂಡರಾದ ಶಂಕರಗೌಡ ಎಸ್. ಬಿರಾದಾರ, ರಾಮನಗೌಡ ಬಸನಗೌಡ ಪಾಟೀಲ್ ಯತ್ನಾಳ, ನಿಂಗನಗೌಡ ಸೋಲಾಪುರ, ಬಿ.ಎಂ. ಪಾಟೀಲ, ಶಶಿಧರ್ ಸಾತಲಗಾಂವ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT