ಶುಕ್ರವಾರ, ಜೂನ್ 18, 2021
29 °C

ಅಪರಿಪೂರ್ಣ ಪ್ಯಾಕೇಜ್: ಸಂಗಮೇಶ ಬಬಲೇಶ್ವರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಕೊರೊನಾ ಸಂಕಷ್ಟದ ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಘೋಷಿಸಿರುವ ವಿಶೇಷ ಆರ್ಥಿಕ ಪ್ಯಾಕೇಜ್ ಅವೈಜ್ಞಾನಿಕ, ಅಪರಿಪೂರ್ಣ ಹಾಗೂ ನಿಜವಾಗಿ ತೊಂದರೆಗೊಳಗಾದ ಎಲ್ಲರನ್ನೂ ಪರಿಗಣಿಸುವಲ್ಲಿ ವಿಫಲವಾಗಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಸಂಗಮೇಶ ಬಬಲೇಶ್ವರ ಆರೋಪಿಸಿದ್ದಾರೆ.

ಕೋವಿಡ್‌ನಿಂದ ತಂದೆ, ತಾಯಿಯನ್ನು ಕಳೆದುಕೊಂಡಿರುವ ಮಕ್ಕಳಿಗಾಗಿ ಪ್ಯಾಕೇಜ್‌ನಲ್ಲಿ ನೇರವು ಘೋಷಿಸದಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಈಗಲಾದರೂ ಎಚ್ಚೆತ್ತುಕೊಂಡು ದೆಹಲಿ ರಾಜ್ಯ ಸರ್ಕಾರದ ಮಾದರಿಯಲ್ಲಿ ಅನಾಥ ಮಕ್ಕಳ ಬಾಳಿಗೆ ಬೆಳಕು ನೀಡುವ ಪ್ರಯತ್ನ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಒಂದನೇ ಅಲೆಯಿಂದ ಇಂದಿನವರೆಗೂ ಅನುದಾನರಹಿತ ಶಾಲೆಯ ಶಿಕ್ಷಕರು ಸಂಬಳವಿಲ್ಲದೆ ಪರದಾಡುತ್ತಿದ್ದು, ಅವರನ್ನು ಪರಿಗಣಿಸದಿರುವುದು ಖಂಡನೀಯ ಎಂದಿದ್ದಾರೆ.

ರಾಜ್ಯದಾದ್ಯಂತ ಇರುವ ಅನುದಾನ ರಹಿತ ಶಾಲೆಯ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು, ಶಾಶ್ವತ ಅನುದಾನರಹಿತ ಶಿಕ್ಷಣ ಸಂಸ್ಥೆಗಳಿಗೆ ಹಾಗೂ ಆ ಶಿಕ್ಷಣ ಸಂಸ್ಥೆಗಳಲ್ಲಿ ಉದ್ಯೋಗ ಮಾಡುತ್ತಿರುವ ಬೋಧಕೇತರ ಸಿಬ್ಬಂದಿಗೆ ಹಾಗೂ ಆ ಶಾಲೆಗಳ ವಾಹನಗಳ ಚಾಲಕರು ಮತ್ತು ಸಹಾಯಕರಿಗೆ ವಿಶೇಷ ನೆರವನ್ನು ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.

ವಿಶೇಷ ಪ್ಯಾಕೇಜ್‌ನಲ್ಲಿ ಶ್ರಮಿಕ ವರ್ಗಕ್ಕೆ 3 ಸಾವಿರ, 2 ಸಾವಿರ ಘೋಷಣೆ ಮಾಡಿದ್ದೀರಿ. ಇದರಿಂದ ಬಡವನ ಬದುಕು ಹಸನಾಗಿಸಲು ಸಾಧ್ಯವಿಲ್ಲ. ಈಗ ಘೋಷಿಸಿರುವ ನೆರವಿನ ಪ್ರಮಾಣವನ್ನು ದುಪ್ಪಟ್ಟು ಹೆಚ್ಚು ಮಾಡಬೇಕು ಎಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು