ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಂದಿನಿ ಉತ್ಪನ್ನಗಳ ಮಾರಾಟ ದರ ಹೆಚ್ಚಳ ನಾಳೆಯಿಂದ

Published : 30 ಜುಲೈ 2023, 16:12 IST
Last Updated : 30 ಜುಲೈ 2023, 16:12 IST
ಫಾಲೋ ಮಾಡಿ
Comments

ವಿಜಯಪುರ: ಕರ್ನಾಟಕ ಹಾಲು ಮಹಾಮಂಡಳಿಯ ತೀರ್ಮಾನದಂತೆ ಆಗಸ್ಟ್‌ 1ರಿಂದ ನಂದಿನಿ ಹಾಲು, ಮೊಸರು, ಮಜ್ಜಿಗೆ ಮತ್ತು ಲಸ್ಸಿ ಗರಿಷ್ಠ ಮಾರಾಟ ದರವನ್ನು ಪ್ರತಿ ಲೀಟರ್‌ಗೆ ₹ 3 ರಂತೆ ಹೆಚ್ಚಿಸಿ, ಪರಿಷ್ಕರಿಸಲಾಗಿದೆ ಎಂದು ವಿಜಯಪುರ, ಬಾಗಲಕೋಟೆ ಸಹಕಾರಿ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ಹಾಲು ಉತ್ಪಾದನಾ ವೆಚ್ಚವು ದಿನದಿಂದ ದಿನಕ್ಕೆ ಹೆಚ್ಚಿಗೆಯಾಗುತ್ತಿದ್ದು ಮತ್ತು ಜಿಲ್ಲಾ ಹಾಲು ಒಕ್ಕೂಟದಲ್ಲಿ ಹಾಲು ಸಂಸ್ಕರಣೆ, ಸಾಗಾಣಿಕೆ, ಖರೀದಿ ದರಗಳಂತಹ ಎಲ್ಲಾ ಅಂಶಗಳನ್ನು ಪರಿಗಣಿಸಿ, ಜುಲೈ 21ರಂದು ನಡೆದ ಕರ್ನಾಟಕ ಹಾಲು ಮಹಾಮಂಡಳದ ಸಭೆಯಲ್ಲಿ ಮುಖ್ಯಮಂತ್ರಿಗಳು ನಂದಿನಿ ಹಾಲಿನ ಮಾರಾಟ ದರವನ್ನು ಪ್ರತಿ ಲೀಟರ್‌ಗೆ ₹3 ರಂತೆ ಹೆಚ್ಚಳಕ್ಕೆ ಸಮ್ಮತಿ ನೀಡಿರುತ್ತಾರೆ ಎಂದು ತಿಳಿಸಿದ್ದಾರೆ.

ಹೆಚ್ಚುವರಿ ಮಾಡಿರುವ ಮಾರಾಟ ದರದ ಸಂಪೂರ್ಣ ಮೊತ್ತವನ್ನು ಹೈನುಗಾರ ರೈತರಿಗೆ ವರ್ಗಾಯಿಸಲು ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT