ವಿಜಯಪುರ: ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಹೆಚ್ಚಳ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯ ಎಂದು ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಘಟಕದ ಕಾರ್ಯದರ್ಶಿ ಬಿ.ಭಗವಾನರೆಡ್ಡಿ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಹೆಚ್ಚಳದ ಭಾಗವಾಗಿ ಬೆಂಗಳೂರು ವೈದ್ಯಕೀಯ ಕಾಲೇಜಿಗೆ ಸೇರಿದ ವಿಕ್ಟೋರಿಯಾ, ಬೌರಿಂಗ್, ಮಿಂಟೋ, ವಾಣಿವಿಲಾಸ ಮೊದಲಾದ ಆಸ್ಪತ್ರೆಗಳಲ್ಲಿ ಈಗಾಗಲೇ ಶುಲ್ಕ ಹೆಚ್ಚಳ ಜಾರಿಯಾಗಿದೆ. ನೋಂದಣಿ ಶುಲ್ಕ ₹20 ರಿಂದ ₹50ಕ್ಕೆ, ತ್ಯಾಜ್ಯ ನಿರ್ವಹಣೆಯ ಶುಲ್ಕ ₹10 ರಿಂದ ₹50ಕ್ಕೆ, ರಕ್ತ ಪರೀಕ್ಷೆಯ ಶುಲ್ಕ ₹70 ರಿಂದ ₹120ಕ್ಕೆ ಏರಿಕೆ ಮಾಡಲಾಗಿದೆ. ಅಲ್ಲದೇ ಬೇರೆ ಬೇರೆ ಪರೀಕ್ಷಾ ಶುಲ್ಕ, ವಾರ್ಡ್ ಶುಲ್ಕಗಳನ್ನು ಕೂಡ ಏರಿಕೆ ಮಾಡಲಾಗಿದೆ.

ಸರ್ಕಾರಿ ಆಸ್ಪತ್ರೆಗಳಿಗೆ ಬರುವ ರೋಗಿಗಳು ಅತ್ಯಂತ ಬಡವರು. ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ಸೇರಿದ ಆಸ್ಪತ್ರೆಗಳಲ್ಲಿ ಬಿಪಿಎಲ್ ಕಾರ್ಡ್ ಇರುವವರಿಗೂ ಉಚಿತ ಸೇವೆ ನೀಡಲಾಗುವುದಿಲ್ಲ. ಆಯುಷ್ಮಾನ್ ಭಾರತ್ ಯೋಜನೆಯನ್ನು ಅವಲಂಬಿಸಬೇಕಾಗಿದೆ. ಅದರಿಂದಲೂ ಪೂರ್ತಿ ಖರ್ಚು ದೊರಕುವುದಿಲ್ಲ. ಬಡ ರೋಗಿಗಳು ಹಣ ತೆತ್ತು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವಂತಾಗಿದೆ. ಈಗಾಗಲೇ ಬೆಲೆ ಏರಿಕೆಯಿಂದ ಬಳಲಿರುವ ಬಡವರಿಗೆ, ಸೂಕ್ತ ಆರೋಗ್ಯ ಸೇವಾ ಯೋಜನೆಗಳೇ ಇಲ್ಲದಿರುವ ಪರಿಸ್ಥಿತಿಯಲ್ಲಿ ಸರ್ಕಾರಗಳು ಕನಿಷ್ಠ ಸರ್ಕಾರಿ ಆಸ್ಪತ್ರೆಗಳಲ್ಲಾದರೂ ಎಲ್ಲರಿಗೂ ಉಚಿತ ಸೇವೆ ನೀಡಬೇಕು. ಹಾಗೆಯೇ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲ ಪಡಿಸಲು ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ, ಅವಶ್ಯಕ ಯಂತ್ರೋಪಕರಣಗಳು ಹಾಗೂ ಸೌಲಭ್ಯಗಳನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಸರ್ಕಾರ ದರ ಏರಿಕೆ ನಿರ್ಧಾರ ತಕ್ಷಣವೇ ಹಿಂಪಡೆದು, ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ಸೌಲಭ್ಯ ಹಾಗೂ ಗುಣಮಟ್ಟವನ್ನು ಉತ್ತಮ ಪಡಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.